ಭಾರತದಲ್ಲಿ 45 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಫೆಬ್ರವರಿ.04: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಕ್ಷಿಪ್ರಗತಿಯಲ್ಲಿ ನಡೆಯತ್ತಿದೆ. ಕೇವಲ 18 ದಿನಗಳಲ್ಲೇ 40 ಲಕ್ಷಕ್ಕಿಂತ ಅಧಿಕ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡುವ ಮೂಲಕ ವಿಶ್ವದಲ್ಲೇ ಅತಿಕಡಿಮೆ ಅವಧಿಗೆ ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ದೇಶಗಳ ಸಾಲಿನಲ್ಲಿ ಭಾರತವು ಅಗ್ರಸ್ಥಾನ ಅಲಂಕರಿಸಿದೆ.
ಕಳೆದ ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊವಿಡ್-19 ಲಸಿಕೆ ವಿತರಣೆ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಿದರು. 19 ದಿನಗಳಲ್ಲೇ ದೇಶದ 45 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.
ಭಾರತದಾದ್ಯಂತ ಇದುವರೆಗೂ 4,49,552 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 4,63,793
ರಾಜಸ್ಥಾನ - 3,63,521
ಮಹಾರಾಷ್ಟ್ರ - 3,54,633
ಮಧ್ಯಪ್ರದೇಶ - 3,30,722
ಕರ್ನಾಟಕ - 3,18,735












Click it and Unblock the Notifications