ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 45149 ಮಂದಿಗೆ ಕೊವಿಡ್-19

|
Google Oneindia Kannada News

ನವದೆಹಲಿ, ಅಕ್ಟೋಬರ್.26: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯಲ್ಲೇ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಒಂದೇ ದಿನ 45149 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 59,105 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 480 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕೊವ್ಯಾಕ್ಸಿನ್ ಲಸಿಕೆ: ಮೂರನೇ ಹಂತದ ಮಾನವ ಪ್ರಯೋಗ ಆರಂಭಕೊವ್ಯಾಕ್ಸಿನ್ ಲಸಿಕೆ: ಮೂರನೇ ಹಂತದ ಮಾನವ ಪ್ರಯೋಗ ಆರಂಭ

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 79,09,960ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,19,014 ಮಂದಿ ಪ್ರಾಣ ಬಿಟ್ಟಿದ್ದಾರೆ. 71,37,229 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 6,53,717 ಸಕ್ರಿಯ ಪ್ರಕರಣಗಳಿವೆ.

45149 New Covid-19 Cases And 480 Deaths Reported In India In The Last 24 Hours


9,39,309 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 9,39,309 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 10,34,62,778 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 43343796ರ ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 11,59,082ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 31900845 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

Recommended Video

Corona ಓಡಿಸೋ ಸಮಯ ದೂರ ಇಲ್ಲಾ | Corona Vaccine | Oneindia Kannada

English summary
45149 New Covid-19 Cases And 480 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X