ಭಾರತದಲ್ಲಿ ಒಂದೇ ದಿನ 45230 ಮಂದಿಗೆ ಕೊರೊನಾವೈರಸ್ ಸೋಂಕು

ನವದೆಹಲಿ, ನವೆಂಬರ್.02: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದಂತೆ ತೋರುತ್ತಿದೆ. ಕಳೆದ 24 ಗಂಟೆಗಳಲ್ಲಿ 45230 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 53,285 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 496 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 82,29,313ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,22,607 ಮಂದಿ ಪ್ರಾಣ ಬಿಟ್ಟಿದ್ದಾರೆ. 75,44,798 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 5,61,908 ಸಕ್ರಿಯ ಪ್ರಕರಣಗಳಿವೆ.

45230 New Covid-19 Cases And 496 Deaths Reported In India In The Last 24 Hours

8,55,800 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 8,55,800 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 11,07,43,103 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 46809252 ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 12,05,194ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 33753770 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

Recommended Video

      DK Ravi ನಾನು ತುಂಬಾ ಚನ್ನಾಗಿದ್ವಿ! | Kusuma Exclusive Interview | Part 2 | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+