ಡೇಂಜರ್: ಭಾರತದಲ್ಲಿ ಒಂದೇ ದಿನ 45,352 ಮಂದಿಗೆ ಕೊರೊನಾವೈರಸ್

ನವದೆಹಲಿ, ಸಪ್ಟೆಂಬರ್ 3: ಭಾರತದಲ್ಲಿ ಎರಡು ತಿಂಗಳ ನಂತರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ. ಕಳೆದ ಎರಡ್ಮೂರು ದಿನಗಳಿಂದ ಪ್ರತಿನಿತ್ಯ ಹೊಸ ಪ್ರಕರಣಗಳ ಸಂಖ್ಯೆ 45 ಸಾವಿರದ ಗಡಿ ದಾಟುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 45,352 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 34,791 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 366 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ.

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,99,778ಕ್ಕೆ ಏರಿಕೆಯಾಗಿದೆ. ಇದುವರೆಗೂ 3,20,63,616 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,39,895ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಅತಿಹೆಚ್ಚು ಹೊಸ ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ವರದಿಯಾಗಿವೆ. ದೇಶದಲ್ಲಿನ ಒಟ್ಟು 45,352 ಕೊವಿಡ್-19 ಸೋಂಕಿತ ಪ್ರಕರಣಗಳ ಪೈಕಿ ಕೇರಳದಲ್ಲಿ 32,097 ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ 16.66 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ 16.66 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆ ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 16,66,334 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 52,65,35,068 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

67 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

67 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 67 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 230 ದಿನಗಳಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 64,70,901 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 45,48,047 ಮಂದಿಗೆ ಮೊದಲ ಡೋಸ್ ಹಾಗೂ 19,22,854 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈವರೆಗೂ 67,09,59,968 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 64,65,07,160 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಲಸಿಕೆ ವಿತರಣೆ ಪ್ರಮಾಣದ ಕುರಿತು ಮಾಹಿತಿ

ದೇಶದಲ್ಲಿ ಲಸಿಕೆ ವಿತರಣೆ ಪ್ರಮಾಣದ ಕುರಿತು ಮಾಹಿತಿ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,59,871 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 84,29,717 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,27,131 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,33,85,387 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 51,46,02,331 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 15,52,33,377 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 3ರ ಅಂಕಿ-ಅಂಶಗಳ ಪ್ರಕಾರ, 64,65,07,160 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 64,65,07,160

* ಕೊವಿಡ್-19 ಲಸಿಕೆಯ ಲಭ್ಯತೆ - 4,78,94,030

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+