ಭಾರತದಲ್ಲಿ 90ಲಕ್ಷಕ್ಕೇರಿದ ಕೊರೊನಾ ಸೋಂಕಿತರ ಸಂಖ್ಯೆ
ನವದೆಹಲಿ, ನವೆಂಬರ್ 20:ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 90 ಲಕ್ಷಕ್ಕೇರಿದೆ.
ಅತಿ ಹೆಚ್ಚು ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಥಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೊವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಮತ್ತೊಂದೆಡೆ 24 ಗಂಟೆಗಳಲ್ಲಿ 584 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,162ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಈ ನಡುವೆ ನಿನ್ನೆ ಒಂದೇ ದಿನ 44,807 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,28,410ಕ್ಕೆ ಏರಿಕೆಯಾಗಿದೆ.












Click it and Unblock the Notifications