ಕೊರೊನಾ ಸೋಂಕು; ದೇಶದಲ್ಲಿ ಏರಿಕೆಯಾಗಿದೆ ಚೇತರಿಕೆ ಪ್ರಮಾಣ
ನವದೆಹಲಿ, ಜುಲೈ 02: ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಏರುತ್ತಿದ್ದು, ಚೇತರಿಕೆ ಪ್ರಮಾಣ ಶೇ. 97.01ರಷ್ಟು ದಾಖಲಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 46,617 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಗುಣಮುಖರ ಸಂಖ್ಯೆ
59,384 ಆಗಿದೆ. ಒಂದು ದಿನದ ಅವಧಿಯಲ್ಲಿ 853 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಶುಕ್ರವಾರದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಒಟ್ಟು 3,04,58,251 ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2,95,48,302 ಸೋಂಕಿತರು ಗುಣಮುಖರಾಗಿದ್ದಾರೆ. ಸೋಂಕಿನಿಂದ ಈವರೆಗೂ 4,00,312 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಸದ್ಯಕ್ಕೆ 5,09,637 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ 1.67% ಆಗಿದ್ದು, ಚೇತರಿಕೆ ಪ್ರಮಾಣ 97.01% ಆಗಿದೆ.
ಜುಲೈ 1ರವರೆಗೂ 41,42,51,520 ಮಾದರಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಜುಲೈ ಒಂದರಂದು 18,80,026 ಮಾದರಿಗಳನ್ನು ಪರೀಕ್ಷಿಸಿರುವುದಾಗಿ ಐಸಿಎಂಆರ್ ಮಾಹಿತಿ ನೀಡಿದೆ.
34,00,76,232 ಜನರಿಗೆ ಕೊವಿಡ್-19 ಲಸಿಕೆ: ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಚುರುಕುಗೊಳಿಸಲಾಗಿದೆ. ಜನವರಿ 16ರಿಂದ ಅಭಿಯಾನ ಆರಂಭವಾಗಿದ್ದು, ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆ ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೂ 34,00,76,232 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.











Click it and Unblock the Notifications