ಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ
ನವದೆಹಲಿ, ಅಕ್ಟೋಬರ್ 20: ಭಾರತದಲ್ಲಿ ಕಳೆದೊಂದು ವಾರದಿಂದ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಭಾರತದಲ್ಲಿ ಇಂದು 46,791 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 587 ಮಂದಿ ಮೃತಪಟ್ಟಿದ್ದಾರೆ.
ಒಟ್ಟು 75,97,064 ಪ್ರಕರಣಗಳಿವೆ, ಸಕ್ರಿಯ ಪ್ರಕರಣಗಳು 7,48,538, 67,33,329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 1,15,197 ಮಂದಿ ಸಾವನ್ನಪ್ಪಿದ್ದಾರೆ. ತೆಲಂಗಾಣದಲ್ಲಿ ಇಂದು 1486 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ, 1891 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ 75 ಲಕ್ಷ ದಾಟಿದ ಕೊರೊನಾ ಸೋಂಕಿತರು
ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗುತ್ತಿವೆ.
ಭಾರತ, ಬಾಂಗ್ಲಾದೇಶ ಸೇರಿದಂತೆ ಆಗ್ನೇಯ ಏಷ್ಯಾದಲ್ಲಿ ಕೊರೊನಾ ಸೋಂಕಿತರ ಹೊಸ ಪ್ರಕರಣಗಳು ಕಡಿಮೆಯಾಗಿದ್ದರೂ ಕೂಡ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಪರಿಸ್ಥಿತಿ ಹೀಗಿದ್ದರೂ ಕೊರೊನಾದೆಡೆಗೆ ಯಾವುದೇ ನಿರ್ಲಕ್ಷ್ಯ, ಮೈಮರೆಯುವುದು ಹಾಗೂ ನಿಯಮಗಳನ್ನು ಸಡಿಲಿಕೆ ಬೇಡ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.
ಈಗ ಹಬ್ಬದ ದಿನಗಳು ಇದ್ದು, ಜೊತೆ ಜೊತೆಗೇ ಶೀತ ವಾತಾವರಣವೂ ಇರುವ ಕಾರಣದಿಂದಾಗಿ ನಮ್ಮ ಎಚ್ಚರಿಕೆಯಲ್ಲಿ ನಾವು ಇರದೇ ಇದ್ದಲ್ಲಿ ಪರಿಸ್ಥಿತಿ ಉಲ್ಬಣಗೊಳ್ಳಲಿದೆ ಎಂದು ಖೇತ್ರಪಾಲ್ ಸಿಂಗ್ ಎಚ್ಚರಿಸಿದ್ದಾರೆ.