ಭಾರತದಲ್ಲಿ ಭಯ ಹುಟ್ಟಿಸಿದ ಕೊರೊನಾವೈರಸ್ 2ನೇ ಅಲೆ
ನವದೆಹಲಿ, ಮಾರ್ಚ್ 22: ಕೊರೊನಾವೈರಸ್ 2ನೇ ಅಲೆಯ ಹರಡುವಿಕೆ ವೇಗಕ್ಕೆ ಭಾರತಕ್ಕೆ ಭಾರತವೇ ಬೆಚ್ಚಿ ಬೀಳುವಂತಾಗಿದೆ. ಪ್ರತಿನಿತ್ಯ ವರದಿಯಾಗುತ್ತಿರುವ ಹೊಸ ಪ್ರಕರಣಗಳ ಸಂಖ್ಯೆ ಹೊಸ ದಾಖಲೆ ಬರೆಯುತ್ತಿದೆ.
ಕಳೆದ 24 ಗಂಟೆಗಳಲ್ಲೇ 46951 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 21,180 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಂದೇ ದಿನ 212 ಜನರು ಪ್ರಾಣ ಬಿಟ್ಟಿದ್ದಾರೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,16,46,081 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈವರೆಗೂ 1,11,51,468 ಸೋಂಕಿತರು ಗುಣಮುಖರಾಗಿದ್ದು, ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ 1,59,967ಕ್ಕೆ ಏರಿಕೆಯಾಗಿದೆ. ಉಳಿದಂತೆ 3,34,646 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 4,50,65,998 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.












Click it and Unblock the Notifications