ಭಾರತಕ್ಕೆ ಕೊರೊನಾವೈರಸ್ ಅಪಾಯ ಹೆಚ್ಚಿಸುವುದೇ ಕೇರಳ!?

ನವದೆಹಲಿ, ಸಪ್ಟೆಂಬರ್ 2: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿಯು ಇಡೀ ದೇಶದ ಚಿತ್ರಣವನ್ನೇ ಬದಲಿಸುತ್ತಿದೆ. ಭಾರತದಲ್ಲಿ ಮತ್ತೆ ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರದ ಸನ್ನಿಹಿತಕ್ಕೆ ತಲುಪುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 47,092 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 35,181 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 507 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 4,39,529ಕ್ಕೆ ಏರಿಕೆಯಾಗಿದೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ. ಇದುವರೆಗೂ 3,20,28,825 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, 3,89,583 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಅತಿಹೆಚ್ಚು ಹೊಸ ಪ್ರಕರಣಗಳು ಕೇರಳ ರಾಜ್ಯವೊಂದರಲ್ಲೇ ವರದಿಯಾಗಿವೆ. ದೇಶದಲ್ಲಿನ ಒಟ್ಟು 47,092 ಕೊವಿಡ್-19 ಸೋಂಕಿತ ಪ್ರಕರಣಗಳ ಪೈಕಿ ಕೇರಳದಲ್ಲಿ 32,803 ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ 16 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ 16 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದರೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 16,84,441 ಜನರಿಗೆ ಪರೀಕ್ಷೆ ನಡೆಸಲಾಗಿದೆ. ದೇಶದಲ್ಲಿ ಈವರೆಗೂ 52,48,68,734 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

66 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ 66 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 229 ದಿನಗಳಾಗಿದೆ. ಕಳೆದ 24 ಗಂಟೆಗಳಲ್ಲಿ 81,09,244 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 66,30,37,334 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 64,51,07,160 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 2ರ ಅಂಕಿ-ಅಂಶಗಳ ಪ್ರಕಾರ, 64,51,07,160 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 64,51,07,160

* ಕೊವಿಡ್-19 ಲಸಿಕೆಯ ಲಭ್ಯತೆ - 5,21,37,660

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+