ಭಾರತದಲ್ಲಿ ಕೊರೊನಾ ಸ್ಫೋಟ: ಒಂದೇ ದಿನ 47262 ಮಂದಿಗೆ ಸೋಂಕು!

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆಯ ಹರಡುವಿಕೆ ಭೀತಿ ದಿನೇ ದಿನೆ ಹೆಚ್ಚುತ್ತಿದೆ. ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಏರುಮುಖವಾಗಿ ಸಾಗುತ್ತಿದೆ.

Recommended Video

      corona second wave

      ಕಳೆದ 24 ಗಂಟೆಗಳಲ್ಲೇ 47262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 23,907 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಂದೇ ದಿನ 275 ಜನರು ಪ್ರಾಣ ಬಿಟ್ಟಿದ್ದಾರೆ.

      ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು 1,17,34,058 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈವರೆಗೂ 1,12,05,160 ಸೋಂಕಿತರು ಗುಣಮುಖರಾಗಿದ್ದು, ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ 1,60,441ಕ್ಕೆ ಏರಿಕೆಯಾಗಿದೆ. ಉಳಿದಂತೆ 3,68,457 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

       47262 New Coronavirus Cases Reported in India in the Last 24 Hours

      ದೇಶದಲ್ಲಿ ಕೊವಿಡ್-19 ತಪಾಸಣೆ ವೇಗ ಹೆಚ್ಚಳ:

      ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ತಪಾಸಣೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 10,25,628 ಜನರಿಗೆ ಕೊವಿಡ್-19 ತಪಾಸಣೆ ಮಾಡಲಾಗಿದೆ. ದೇಶದಲ್ಲಿ ಈವರೆಗೂ 23,64,38,861 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

      ಕೊರೊನಾವೈರಸ್ ಸೋಂಕಿಗೆ ಲಸಿಕೆ:

      ದೇಶದಲ್ಲಿ ಈವರೆಗೂ 5,08,41,286 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+