ದೇಶದಲ್ಲಿ ಐದು ಲಕ್ಷಕ್ಕೆ ಇಳಿಕೆಯಾದ ಸಕ್ರಿಯ ಪ್ರಕರಣಗಳು

ನವದೆಹಲಿ, ಅಕ್ಟೋಬರ್ 31: ದೇಶದಲ್ಲಿ ಮತ್ತೆ 50 ಸಾವಿರಕ್ಕೂ ಕಡಿಮೆ ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತದಲ್ಲಿ 24 ಗಂಟೆಗಳಲ್ಲಿ 48,268 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಬಾರಿ ಕೂಡ ಹೊಸ ಪ್ರಕರಣಗಳಿಗಿಂತ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆಯೇ ಅಧಿಕವಾಗಿರುವುದು ಸಮಾಧಾನ ಮೂಡಿಸಿದೆ.

ಕಳೆದ 24 ಗಂಟೆಗಳಲ್ಲಿ 551 ಮಂದಿ ಕೊರೊನಾ ವೈರಸ್‌ನಿಂದ ಬಲಿಯಾಗಿದ್ದಾರೆ. ಇದರಿಂದ ದೇಶದಲ್ಲಿ ವೈರಸ್ ಸೋಂಕಿಗೆ ಬಲಿಯಾದವರ ಸಂಖ್ಯೆ 1,21,641ಕ್ಕೆ ಏರಿಕೆಯಾಗಿದೆ. ಶುಕ್ರವಾರದ ಅಂತ್ಯದ ವೇಳೆಗೆ 59,454 ಮಂದಿ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೂ 74,32,829 ಮಂದಿ ಗುಣಮುಖರಾಗಿ ಮನೆಗೆ ಮರಳಿದಂತಾಗಿದೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕಡಿಮೆಯಾಗಿರುವುದು ಮತ್ತೊಂದು ಗಮನಾರ್ಹ ಸಾಧನೆ. ಶನಿವಾರದ ಬೆಳಗಿನ ವೇಳೆಗೆ ದೇಶದಲ್ಲಿ 5,82,649 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ದಾಖಲಾದ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 81,37,119ಕ್ಕೆ ತಲುಪಿದೆ.

 48,268 New Coronavirus Cases Reported In India in 24 Hours

Recommended Video

      ಮಾನವೀಯತೆಗೆ ಮನಸೋತ ಚಾಲೆಂಜಿಂಗ್ ಸ್ಟಾರ್ ದರ್ಶನ್ | Darshan | Munirathna | Oneindia Kannada

      ದೆಹಲಿ, ಮಹಾರಾಷ್ಟ್, ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು ರಾಜ್ಯಗಳು ಅತಿ ಹೆಚ್ಚು ಸೋಂಕಿನ ಸಂಕಷ್ಟಕ್ಕೆ ಒಳಗಾದ ರಾಜ್ಯಗಳಾಗಿ ಮುಂದುವರಿದಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+