ಭಾರತದಲ್ಲಿ ಒಂದೇ ದಿನ 57,386 ಕೊವಿಡ್-19 ಸೋಂಕಿತರು ಗುಣಮುಖ

ನವದೆಹಲಿ, ಅಕ್ಟೋಬರ್.30: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದಂತೆ ತೋರುತ್ತಿದೆ. ಕಳೆದ 24 ಗಂಟೆಗಳಲ್ಲಿ 48648 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 57,386 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 563 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 80,88,851ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,21,090 ಮಂದಿ ಪ್ರಾಣ ಬಿಟ್ಟಿದ್ದಾರೆ. 73,73,375 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 5,94,386 ಸಕ್ರಿಯ ಪ್ರಕರಣಗಳಿವೆ.

48648 New Covid-19 Cases And 563 Deaths Reported In India In The Last 24 Hours


11,64,648 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,64,648 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 10,77,28,088 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 45321659 ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 11,86,243ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 32993196 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+