ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 8 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಒಟ್ಟು ಪ್ರಕರಣ

|
Google Oneindia Kannada News

ನವದೆಹಲಿ, ಅಕ್ಟೋಬರ್.28: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ಪ್ರಮಾಣ ಕೊಂಚ ತಗ್ಗಿದಂತೆ ತೋರುತ್ತಿದೆ. ಕಳೆದ 24 ಗಂಟೆಗಳಲ್ಲಿ 49881 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದೊಂದು ದಿನಗಳಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳಿಗಿಂತ ಗುಣಮುಖ ಪ್ರಕರಣಗಳ ಸಂಖ್ಯೆಯೇ ಹೆಚ್ಚಾಗಿದೆ. ಒಂದು ದಿನದಲ್ಲಿ 56,480 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 517 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ 2500 ರೂ. ಒಂದು ಕೊವಿಡ್-19 ನೆಗೆಟಿವ್ ಸರ್ಟಿಫಿಕೇಟ್! ಕರ್ನಾಟಕದಲ್ಲಿ 2500 ರೂ. ಒಂದು ಕೊವಿಡ್-19 ನೆಗೆಟಿವ್ ಸರ್ಟಿಫಿಕೇಟ್!

ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 80,40,203ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,20,527 ಮಂದಿ ಪ್ರಾಣ ಬಿಟ್ಟಿದ್ದಾರೆ. 73,15,989 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 6,03,687 ಸಕ್ರಿಯ ಪ್ರಕರಣಗಳಿವೆ.

49881 New Covid-19 Cases And 517 Deaths Reported In India In The Last 24 Hours

10,75,760 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10,75,760 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 10,65,63,440 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 44774237 ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 11,79,224ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 32727129 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

English summary
49881 New Covid-19 Cases And 517 Deaths Reported In India In The Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X