ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲೂ ದೋಷಿ
ರಾಂಚಿ, ಮಾರ್ಚ್ 19: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ದುಮ್ಕಾ ಟ್ರೆಶರಿ ಪ್ರಕರಣದ ತೀರ್ಪು ಇಂದು(ಮಾ.19) ಹೊರಬಿದ್ದಿದ್ದು, ಈ ಪ್ರಕರಣದಲ್ಲೂ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ದೋಷಿ ಎಂದು ಪರಿಗಣಿಸಿದೆ.
ಮೇವು ಹಗರಣಕ್ಕೆ ಸಂಬಂಧಿಸಿದ ನಾಲ್ಕನೇ ಪ್ರಕರಣ ಇದಾಗಿದೆ. ಈಗಾಗಲೇ ಆರ್ ಜೆಡಿ ಮುಖಂಡ ಲಾಲೂ ಅವರನ್ನು ಮೇವು ಹಗರಣದ ಮೂರು ಆರೋಪಗಳಲ್ಲಿ ದೋಷಿ ಎಂದು ಪರಿಗಣಿಸಿರುವ ಸಿಬಿಐ ವಿಶೇಷ ನ್ಯಾಯಾಲಯ, ಮೂರು ಪ್ರಕರಣಗಳಿಂದ ಒಟ್ಟು 13.5 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮೇವು ಹಗರಣದ ಮೂರನೇ ಪ್ರಕರಣದಲ್ಲಿ ಲಾಲೂಗೆ 5 ವರ್ಷ ಜೈಲು
ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣ ಇದಾಗಿದೆ.