• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೈದರಾಬಾದ್‌ ಸಾಮೂಹಿಕ ಅತ್ಯಾಚಾರ ಪ್ರಕರಣ: ಸ್ನೇಹಿತೆಯ ಮೇಲೆಯೇ ದೌರ್ಜನ್ಯ ಎಸಗಿದ ಐವರು ಗೆಳೆಯರು

|
Google Oneindia Kannada News

ಹೈದರಾಬಾದ್, ನವೆಂಬರ್‌ 29: 17 ವರ್ಷದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿ ಐವರು ವಿದ್ಯಾರ್ಥಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಐವರು ಹುಡುಗರು(ಎಲ್ಲರು 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು) ತಮ್ಮ ಸಹಪಾಠಿ ಒಬ್ಬಳ (ಬದುಕುಳಿದಿರುವ) ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಕೊಂಡ ಹೈದರಾಬಾದ್‌ ಪೊಲೀಸರು ಈ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ; ಹಲ್ಲುಜ್ಜನಿಗೆ ಮರಣದಂಡನೆ ಶಿಕ್ಷೆಅಪ್ರಾಪ್ತ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ; ಹಲ್ಲುಜ್ಜನಿಗೆ ಮರಣದಂಡನೆ ಶಿಕ್ಷೆ

ಆರೋಪಿಗಳೆಲ್ಲರೂ ಸಂತ್ರಸ್ತೆಯ ಸಹಪಾಠಿಗಳು ಎಂದು ರಾಚಕೊಂಡ ಪೊಲೀಸ್ ಕಮಿಷನರ್‌ ಮಾಹಿತಿ ನೀಡಿದ್ದಾರೆ.

ಅತ್ಯಾಚಾರ ಎಸಗಿದ ಘಟನೆಯನ್ನು ಆರೋಪಿಗಳು ವಿಡಿಯೊದಲ್ಲಿ ರೆಕಾರ್ಡ್‌ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದ ಹತ್ತು ದಿನಗಳ ನಂತರ ಐವರು ಆರೋಪಿಗಳಲ್ಲಿ ಒಬ್ಬ ಮತ್ತೆ ಅದೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ವಿಡಿಯೋವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಳ್ಳಲಾಗಿದೆ. ಬದುಕುಳಿದ ವಿದ್ಯಾರ್ಥಿನಿ ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಆ ನಂತರ ಅವರು ಹಯತ್‌ನಗರ ಪೊಲೀಸ್ ಠಾಣೆಗೆ ಬಂದು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮತ್ತು ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

5 Boys Detained For Sexually Assaulting Teen Friend In Hyderabad

ಮುಂದಿನ ಕ್ರಮಕ್ಕಾಗಿ ವಿದ್ಯಾರ್ಥಿಗಳನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ಈ ಹಿಂದೆಯೂ ಇದೇ ರೀತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿತ್ತು. ವಿದ್ಯಾರ್ಥಿನಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿದ್ದ ಸಹಪಾಠಿಗಳು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ ಘಟನೆ ವರದಿಯಾಗಿತ್ತು.

English summary
Five boys were detained by police in Hyderabad for allegedly sexually assaulting a 17-year-old girl, police said on Tuesday. The five boys, all class 9 and 10 students, sexually assaulted one of their classmates (the survivor) and also recorded the incident, they said,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X