ಕಳ್ಳಭಟ್ಟಿ ಸಾರಾಯಿಗೆ ಐದು ಮಂದಿ ಬಲಿ, ನಾಲ್ವರ ಸ್ಥಿತಿ ಗಂಭೀರ
ರೋಹ್ಟಾಸ್, (ಬಿಹಾರ), ಅಕ್ಟೋಬರ 28: ಕಳ್ಳಭಟ್ಟಿ ಸಾರಾಯಿ ಸೇವಿಸಿ ಐದು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಬಿಹಾರದ ರೋಹ್ಟಾಸ್ ಜಿಲ್ಲೆಯ ದನ್ವಾರ್ ಗ್ರಾಮದಲ್ಲಿ ನಡೆದಿದೆ.
ಬಿಹಾರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧಿಸಿದ್ದರಿಂದ ಕಳ್ಳಭಟ್ಟಿ ಸಾರಾಯಿ ಮಾರಾಟ ದಂಧೆ ನಡೆಯುತ್ತಿದೆ. ಈ ಕಳ್ಳಭಟ್ಟಿ ಸೇವಿಸಿದ್ದರಿಂದ ಐದು ಮಂದಿ ಸಾವನ್ನಪ್ಪಿದ್ದಾರೆ. ಇನ್ನು ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಮದ್ಯ ಮಾರಾಟ ನಿಷೇಧದ ಬಳಿಕ ಇದು ಎರಡನೇ ಪ್ರಕರಣವಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಸೂಕ್ತ ತನಿಖೆಗೆ ಆದೇಶ ನೀಡಲಾಗಿದೆ.
ಕಳೆದ ವರ್ಷ ಆಗಸ್ಟ್ ನಲ್ಲಿ ಕೂಡ ಇದೇ ರೀತಿ ಕಳ್ಳಭಟ್ಟಿ ಸಾರಾಯಿ ಸೇವಿಸಿ 13 ಮಂದಿ ಸಾವನ್ನಪ್ಪಿರುವುದನ್ನು ಇಲ್ಲಿ ಸ್ಮರಿಸಹಬುದು.












Click it and Unblock the Notifications