ಲಡಾಖ್ ನಲ್ಲಿ ದೊಡ್ಡ ಅನಾಹುತ: ಐವರು ಯೋಧರ ದುರ್ಮರಣ
ಕೇಂದ್ರಾಡಳಿತ ಪ್ರದೇಶ ಲಡಾಖ್ ನ ವಾಸ್ತವ ನಿಯಂತ್ರಣ ರೇಖೆ (LAC) ಬಳಿ ದರ್ಘಟನೆಯೊಂದು ನಡೆದಿದೆ. ಶನಿವಾರ ಬೆಳಗ್ಗೆ ಸಂಭವಿಸಿದ ಈ ಘಟನೆಯಲ್ಲಿ ಐವರು ಸೇನಾ ಯೋಧರು ಸಾವನ್ನಪ್ಪಿದ್ದಾರೆ. ಈ ಘಟನೆ ಲಡಾಖ್‌ನ ನ್ಯೋಮಾ-ಚುಶುಲ್ ಪ್ರದೇಶದಲ್ಲಿ ನಡೆದಿದ್ದು, ಶಯೋಕ್ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ ಈ ಘಟನೆ ಸಂಭವಿಸಿದೆ.
ಪಿಟಿಐ ಮಾಹಿತಿಯ ಪ್ರಕಾರ ಸೈನಿಕರು ಮಿಲಿಟರಿ ತಾಲೀಮು ಮುಗಿಸಿ T-72 ಟ್ಯಾಂಕ್‌ನಲ್ಲಿ ಹಿಂತಿರುಗುತ್ತಿದ್ದರು. ಆಗ, ಟ್ಯಾಂಕರ್ ನದಿಯನ್ನು ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ನೀರಿನಿ ಮಟ್ಟ ಇದ್ದಕ್ಕಿದ್ದಂತೆ ಹೆಚ್ಚಾಗಿದ್ದರಿಂದ ಈ ಘಟನೆ ಸಂಭವಿಸಿದೆ. ನೀರಿನ ಮಟ್ಟ ಏರಿಕೆ ಆಗಿ ಮೃತಪಟ್ಟವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಕೂಡ ಇದ್ದರು. ಶುಕ್ರವಾರ (ಜೂನ್ 28) ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬೆಳಗ್ಗೆ ಬೆಳಕಿಗೆ ಬಂದಿದೆ.

ಲೇಹ್‌ನ ಫೈರ್ ಅಂಡ್ ಫ್ಯೂರಿ 14 ಕಾರ್ಪ್ಸ್ ಪ್ರಕಾರ, LAC ಯ ಚುಶುಲ್‌ನಿಂದ 148 ಕಿಮೀ ದೂರದಲ್ಲಿರುವ ಮಂದಿರ್ ಮೋರ್ ಬಳಿ ಅಪಘಾತ ಸಂಭವಿಸಿದೆ. ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದರೂ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಸೈನಿಕರನ್ನು ಉಳಿಸಲು ಸಾಧ್ಯವಾಗಲಿಲ್ಲ. ಐವರು ಯೋಧರ ಮೃತದೇಹಗಳು ಪತ್ತೆಯಾಗಿವೆ. ಅವರನ್ನು ರಿಸಲ್ದಾರ್ ಎಂಆರ್ ಕೆ ರೆಡ್ಡಿ, ದಫದಾರ್ ಭೂಪೇಂದ್ರ ನೇಗಿ, ಲ್ಯಾನ್ಸ್ ದಫದಾರ್ ಅಕ್ದುಮ್ ತಯಾಬಮ್, ಹವಾಲ್ದಾರ್ ಎ ಖಾನ್ ಮತ್ತು ನಾಗರಾಜ್ ಪಿ ಎಂದು ಗುರುತಿಸಲಾಗಿದೆ.
ಕಳೆದ ವರ್ಷವೂ ನಡೆದಿತ್ತು ಅಪಘಾತ
ಕಳೆದ ವರ್ಷವೂ ಲಡಾಖ್‌ನಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಸೇನಾ ವಾಹನವೊಂದು 60 ಅಡಿ ಕಂದಕಕ್ಕೆ ಬಿದ್ದ ಪರಿಣಾಮ 9 ಯೋಧರು ಹುತಾತ್ಮರಾಗಿದ್ದರು. ಸೇನಾ ಬೆಂಗಾವಲು ಪಡೆ ಐದು ವಾಹನಗಳನ್ನು ಒಳಗೊಂಡಿತ್ತು. ಇದರಲ್ಲಿ 34 ಸೈನಿಕರು ಇದ್ದರು. ಈ ಅಪಘಾತದಲ್ಲಿ ಓರ್ವ ಯೋಧ ಕೂಡ ಗಾಯಗೊಂಡಿದ್ದಾರೆ.
ರಾಜನಾಥ್ ಸಿಂಗ್ ಸಂತಾಪ
ಲಡಾಖ್‌ನಲ್ಲಿ ಸಂಭಿಸಿದ ಘಟನೆ ದುರದೃಷ್ಟಕರ. ಭಾರತೀಯ ಸೇನೆಯ ಐವರು ವೀರ ಯೋಧರು ಪ್ರಾಣ ಕಳೆದುಕೊಂಡಿರುವುದಕ್ಕೆ ನನಗೆ ಅತೀವ ದುಃಖವಾಗಿದೆ. ದೇಶಕ್ಕೆ ನಮ್ಮ ವೀರ ಸೈನಿಕರ ಅನುಕರಣೀಯ ಸೇವೆಯನ್ನು ನಾವು ಎಂದಿಗೂ ಮರೆಯುವುದಿಲ್ಲ. ಅಗಲಿದ ಕುಟುಂಬಗಳಿಗೆ ನನ್ನ ಸಂತಾಪ. ಈ ದುಃಖದ ಸಮಯದಲ್ಲಿ ಇಡೀ ದೇಶವೇ ಅವರ ಜೊತೆ ನಿಂತಿದೆ ಎಂದು ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.
Deeply saddened at the loss of lives of five of our brave Indian Army soldiers in an unfortunate accident while getting the tank across a river in Ladakh.
— Rajnath Singh (@rajnathsingh) June 29, 2024
We will never forget exemplary service of our gallant soldiers to the nation. My heartfelt condolences to the bereaved…
ಈ ದುರ್ಘಟನೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಲಡಾಖ್‌ನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಐವರು ಸೇನಾ ಯೋಧರು ಸೇನಾ ಯೋಧರು ಹುತಾತ್ಮರಾದ ಸುದ್ದಿ ಅತ್ಯಂತ ದುಃಖಕರವಾಗಿದೆ. ಹುತಾತ್ಮರಾದ ಎಲ್ಲಾ ಸೈನಿಕರಿಗೆ ಶ್ರದ್ಧಾಂಜಲಿ. ನಮ್ಮ ವೀರ ಸೈನಿಕರ ಸಮರ್ಪಣೆ, ಸೇವೆ ಮತ್ತು ತ್ಯಾಗವನ್ನು ದೇಶ ಸದಾ ಸ್ಮರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.
लद्दाख में टैंक के नदी पार करने के सैन्य अभ्यास के दौरान हुए हादसे में भारतीय सेना के पांच जवानों की शहादत का समाचार अत्यंत दुखद है।
— Rahul Gandhi (@RahulGandhi) June 29, 2024
सभी शहीद जवानों को विनम्र श्रद्धांजलि अर्पित करते हुए शोक संतप्त परिजनों के प्रति गहरी संवेदनाएं व्यक्त करता हूं। दुख की इस घड़ी में हम उनके साथ…
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications