ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣಾ ಆಯೋಗ App ಬಳಸಿ ಫಲಿತಾಂಶ ನೋಡೋದು ಹೇಗೆ?

|
Google Oneindia Kannada News

ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ ನೋಡುವ ಸಮಯ ಬಂದಿದೆ. ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭೆ ಚುನಾವಣೆಗಳು ಏಪ್ರಿಲ್ 6ರಂದು ಮುಕ್ತಾಯಗೊಂಡರೆ, ಪಶ್ಚಿಮ ಬಂಗಾಳದಲ್ಲಿ 8ನೇ ಹಾಗೂ ಕೊನೆ ಹಂತದ ಮತದಾನ ಏಪ್ರಿಲ್ 29 ಸಂಪನ್ನವಾಗಿತ್ತು. ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಪುದುಚೇರಿಯಲ್ಲಿ 30 ಹಾಗೂ ಅಸ್ಸಾಂನಲ್ಲಿ 126 ಸ್ಥಾನಕ್ಕಾಗಿ ಚುನಾವಣೆ ನಡೆಸಲಾಗಿದೆ. ಮೇ 2ರಂದು ಅಂತಿಮ ಫಲಿತಾಂಶವನ್ನು ಕೇಂದ್ರ ಚುನಾವಣಾ ಆಯೋಗ ನೀಡಲಿದೆ.

By Elections Results 2021 Live Updates: ಉಪ ಚುನಾವಣೆ ಫಲಿತಾಂಶBy Elections Results 2021 Live Updates: ಉಪ ಚುನಾವಣೆ ಫಲಿತಾಂಶ

ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆದಿದ್ದು, ವಿವಿಧ ರಾಜ್ಯಗಳಲ್ಲಿನ ಉಪ ಚುನಾವಣೆ ಫಲಿತಾಂಶ ಕೂಡಾ ಹೊರಬರಲಿದೆ. ಕೋವಿಡ್ 19 ಸಾಂಕ್ರಾಮಿಕದ ನಡುವೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಬಳಿ ಏಜೆಂಟರುಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

Live Updates: 5 ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟLive Updates: 5 ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟ

ಮತ ಎಣಿಕೆ ಮಾಡುವ ಅಧಿಕಾರಿಗಳಿಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ಕಡ್ಡಾಯವಾಗಿದ್ದು, ಕೋವಿಡ್ ನೆಗಟಿವ್ ಪ್ರಮಾಣ ಪತ್ರ ಹೊಂದಿರಬೇಕು ಅಥವಾ ಎರಡು ಬಾರಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.

5 State Election Results 2021: How To Check Results On ECI Website, App

ಚುನಾವಣಾ ಆಯೋಗದ ಅಧಿಕೃತ ವೆಬ್‌ತಾಣ ಅಥವಾ ಮತದಾರರಿಗೆ ನೆರವು ನೀಡುವ ಅಪ್ಲಿಕೇಷನ್ ಮೂಲಕ ಐದು ರಾಜ್ಯಗಳ ಫಲಿತಾಂಶ ಪಡೆದುಕೊಳ್ಳಬಹುದು.

ಚುನಾವಣಾ ಆಯೋಗದ ವೆಬ್‌ತಾಣ: https://results.eci.gov.in/

ಮೊಬೈಲ್ ಅಪ್ಲಿಕೇಷನ್: Voter Helpline (https://play.google.com/store/apps/details?id=com.eci.citizen&hl=en_IN&gl=US)

ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದು. ನಿಮ್ಮ ಮೊಬೈಲ್ ಸಂಖ್ಯೆ ದಾಖಲಿಸಿ, ಒಟಿಪಿ ಒದಗಿಸಿದ ಬಳಿಕ ಮುಖ್ಯ ಪುಟ ತೆರೆದುಕೊಳ್ಳುತ್ತದೆ. ಅಲ್ಲಿಂದ ನೇರವಾಗಿ ಫಲಿತಾಂಶ ಪುಟಕ್ಕೆ ತೆರಳಬಹುದು. ಕ್ಷಣ ಕ್ಷಣಕ್ಕೆ ಪಕ್ಷವಾರು, ಕ್ಷೇತ್ರವಾರು ಟ್ರೆಂಡ್ ಅಲ್ಲದೆ ಪೂರ್ಣ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು ಎಂದು ಆಯೋಗ ಹೇಳಿದೆ.

English summary
The results of the Assembly Elections in the five states of West Bengal, Tamil Nadu, Kerala, Assam and Puducherry will be declared on May 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X