5 State Exit Polls: ಪಶ್ಚಿಮದಲ್ಲಿ ದೀದಿ, ತಮಿಳುನಾಡಿನಲ್ಲಿ ಸ್ಟಾಲಿನ್ - ದರ್ಬಾರ್‌, ಸಣ್ಣ ಟ್ವಿಸ್ಟ್‌ಗಳ ವಿವರ ಇಲ್ಲಿದೆ

5 State Exit Polls: ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇರಳಂ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಟವಾಗಿದೆ. ಎಕ್ಸಿಟ್ ಪೋಲ್ ಫಲಿತಾಂಶದೊಂದಿಗೆ ವಿವಿಧ ರಾಜ್ಯಗಳ ರಾಜಕೀಯ ಲೆಕ್ಕಾಚಾರವು ತಲೆಕೆಳಗಾಗಿದೆ. ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಆಡಳಿತರೂಢ ಪಕ್ಷಗಳೇ ಅಧಿಕಾರಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಆದರೆ, ಅಸ್ಸಾಂನಲ್ಲಿ ಅತಂತ್ರ ವಿಧಾನಸಭೆ ರಚನೆಯಾಗುವ ಸಾಧ್ಯತೆ ಇದೆ. ಇನ್ನು ಕೇರಳಂನಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರಲಿದೆ. ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಎಕ್ಸಿಟ್ ಪೋಲ್ ಭವಿಷ್ಯದ ಸಂಪೂರ್ಣ ವಿವರ ಇಲ್ಲಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ; ಡಿಎಂಕೆಗೆ ಮೇಲುಗೈ

ತಮಿಳುನಾಡಿನ ವಿಧಾನಸಭೆ ಚುನಾವಣೆಯು ಈ ಬಾರಿ ಇಡೀ ದೇಶದ ಗಮನ ಸೆಳೆದಿತ್ತು. ಸ್ಟಾರ್ ನಟ ವಿಜಯ್ ಅವರು ರಾಜಕೀಯ ಪ್ರವೇಶ ಮಾಡಿದ್ದೂ ಸಹ ಇದಕ್ಕೆ ಕಾರಣ. ತಮಿಳುನಾಡಿನ ವಿಧಾನಸಭೆಯಲ್ಲಿ ಒಟ್ಟು 234 ವಿಧಾನಸಭಾ ಕ್ಷೇತ್ರಗಳಿದ್ದು, ಮ್ಯಾಜಿಕ್ ನಂಬರ್ 118 ಆಗಿದೆ. ತಮಿಳುನಾಡಿನಲ್ಲಿ ಆಡಳಿತರೂಢ ಡಿಎಂಕೆ ಪಕ್ಷವೇ ಅಧಿಕಾರಕ್ಕೇರಲಿದೆ ಎಂದು ಬಹುತೇಕ ಎಕ್ಸಿಟ್ ಪೋಲ್‌ಗಳು ಹೇಳಿವೆ. ಪೀಪಲ್ಸ್ ಪಲ್ಸ್ (Peoples Pulse) ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ, ಡಿಎಂಕೆ 125ರಿಂದ 145 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಲಿದೆ. ವಿರೋಧ ಪಕ್ಷದಲ್ಲಿರುವ ಎಐಡಿಎಂಕೆಯು 65ರಿಂದ 80 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ವಿಜಯ್ ಅವರ ಟಿವಿಕೆ ಪಕ್ಷವು 18ರಿಂದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ. ಇನ್ನೂ ಪಕ್ಷೇತರರು 2ರಿಂದ 6 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

5 State Exit Polls

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ಮಮತಾ ಬ್ಯಾನರ್ಜಿ ದರ್ಬಾರ್

ಪಶ್ವಿಮ ಬಂಗಾಳ ವಿಧಾನಸಭೆ ಚುನಾವಣೆ 2026ರಲ್ಲೂ ಮಮತಾ ಬ್ಯಾನರ್ಜಿ ದರ್ಬಾರ್ ಮುಂದುವರಿದಿದೆ. ಕಳೆದ 15 ವರ್ಷಗಳಿಂದಲೂ ಪಶ್ಚಿಮ ಬಂಗಾಳದಲ್ಲಿ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಅಧಿಕಾರದಲ್ಲಿದೆ. ಈ ಬಾರಿಯೂ ಟಿಎಂಸಿ ಅಧಿಕ್ಕಾರಕ್ಕೇರಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಈ ರಾಜ್ಯದಲ್ಲಿ ಬಿಜೆಪಿಯು ತೀವ್ರ ಪೈಪೋಟಿ ನೀಡಿದರೂ ಅಧಿಕ್ಕಾರಕ್ಕೇರುವುದಕ್ಕೆ ಸಾಧ್ಯವಾಗಿಲ್ಲ. ಆದರೆ ಕಳೆದ ಬಾರಿಗಿಂತಲೂ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಶ್ಚಿಮ ಬಂಗಾಳದ ವಿಧಾನಸಭೆಯ ಸಾಮರ್ಥ್ಯ 294 ಹಾಗೂ ಮ್ಯಾಜಿಕ್ ನಂಬರ್ ಸಂಖ್ಯೆಯು 148 ಆಗಿದೆ. ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ, ಈ ಬಾರಿ ಟಿಎಂಸಿಗೆ 177 ರಿಂದ 187 ಸ್ಥಾನಗಳು, ಬಿಜೆಪಿಗೆ 95ರಿಂದ 110 ಸ್ಥಾನಗಳು, ಕಾಂಗ್ರೆಸ್‌ಗೆ 1ರಿಂದ 3 ಸ್ಥಾನಗಳು ಹಾಗೂ ಎಡರಂಗಕ್ಕೆ 0-1 ಹಾಗೂ ಪಕ್ಷೇತರರು 1ರಿಂದ 3 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಹೇಳಿದೆ.

ಕೇರಳಂನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ - ಪಿಣರಾಯಿಗೆ ಮುಖಭಂಗ

ಕೇರಳಂನಲ್ಲಿ ಕಾಂಗ್ರೆಸ್ - ಯುಡಿಎಫ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಗಳು ಹೇಳಿವೆ. ಎಡ ಪ್ರಜಾಸತ್ತಾತ್ಮಕ ರಂಗ (LDF) ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ನಡುವೆ ಪೈಪೋಟಿ ಏರ್ಪಟ್ಟಿತ್ತು. ಇದೀಗ ಆಡಳಿತರೂಢ ಎಲ್‌ಡಿಎಫ್ ಹೀನಾಯ ಸೋಲು ಅನುಭವಿಸಲಿದೆ ಎಂದು ಹೇಳಲಾಗಿದೆ. ಕೇರಳಂನಲ್ಲಿ ಕಳೆದ 10 ವರ್ಷಗಳಿಂದಲೂ ಎಲ್‌ಡಿಎಫ್ ಅಧಿಕಾರದಲ್ಲಿದೆ. ಕೇರಳಂ ರಾಜ್ಯದಲ್ಲಿ 140 ವಿಧಾನಸಭಾ ಕ್ಷೇತ್ರಗಳಿದ್ದು, ಮ್ಯಾಜಿಕ್ ಸಂಖ್ಯೆಯು 71 ಆಗಿದೆ. ಪೀಪಲ್ಸ್ ಪಲ್ಸ್ ಸಮೀಕ್ಷೆಯ ಪ್ರಕಾರ, ಈ ಬಾರಿ ಯುಡಿಎಫ್ 75ರಿಂದ 85, ಎಲ್‌ಡಿಎಫ್ 55ರಿಂದ 65, ಬಿಜೆಪಿ 0- 3 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಸಮೀಕ್ಷೆ ಹೇಳಿದೆ.

ಅಸ್ಸಾಂ ವಿಧಾನಸಭೆ ಚುನಾವಣೆ - ಅತಂತ್ರ ಫಲಿತಾಂಶದ ಆತಂಕ

ಇನ್ನು ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂಶವು ಅತಂತ್ರವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟ ಪಕ್ಷಗಳ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಎಕ್ಸಿಸ್ ಮೈ ಇಂಡಿಯಾ (Axis My India) ಎಕ್ಸಿಟ್ ಪೋಲ್ ಫಲಿತಾಂಶದ ಪ್ರಕಾರ, 126 ಕ್ಷೇತ್ರಗಳ ಪೈಕಿ ಮ್ಯಾಜಿಕ್ ನಂಬರ್ 64 ಸೀಟುಗಳನ್ನು ಯಾವುದೇ ಪಕ್ಷವು ಸ್ವತಂತ್ರವಾಗಿ ಗೆಲ್ಲುವ ಸಾಧ್ಯತೆ ಇಲ್ಲ ಎಂದು ಹೇಳಿದೆ. ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ (ಎನ್‌ಡಿಎ) 47 ಸೀಟುಗಳು ಬರಲಿವೆ. ಕಾಂಗ್ರೆಸ್‌ 39 ಸ್ಥಾನಗಳಲ್ಲಿ ಗೆಲ್ಲಬಹುದು ಎಂದು ಹೇಳಲಾಗಿದೆ. ಇತರ ಪಕ್ಷಗಳು 14 ಕ್ಷೇತ್ರಗಳಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲಿವೆ ಎಂದು ಎಕ್ಸಿಟ್ ಪೋಲ್ ಭವಿಷ್ಯ ನುಡಿದಿದೆ.

Vijay: ತಮಿಳುನಾಡಿನಲ್ಲಿ ವಿಜಯ್ ಮಾಯೆಯ ಪರಿಣಾಮ; ಕಿಂಗ್ ಮೇಕರ್ ಆಗುವ ಸಾಧ್ಯತೆ
Vijay: ತಮಿಳುನಾಡಿನಲ್ಲಿ ವಿಜಯ್ ಮಾಯೆಯ ಪರಿಣಾಮ; ಕಿಂಗ್ ಮೇಕರ್ ಆಗುವ ಸಾಧ್ಯತೆ

5 State Exit Polls: ಪುದುಚೇರಿಯಲ್ಲಿ ಯಾರಿಗೆ ಗದ್ದುಗೆ

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮತಗಟ್ಟೆ ಸಮೀಕ್ಷೆ ಪ್ರಕಟಿಸಿರುವ ಆಕ್ಸಿಸ್ ಮೈ ಇಂಡಿಯಾ ವರದಿಯ ಪ್ರಕಾರ, ಈ ಬಾರಿಯೂ ಎನ್‌ಡಿಗೆ (ಬಿಜೆಪಿ) 16-20 ಸ್ಥಾನ ಪಡೆದು ಮುನ್ನಡೆ ಸಾಧಿಸಲಿದ್ದು, ಕೇವಲ 6ರಿಂದ 8 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ತಮಿಳುನಾಡಿನೊಂದಿಗೆ ಪುದುಚೇರಿಯಲ್ಲೂ ಸ್ಪರ್ಧೆ ಮಾಡಿದ್ದ ನಟ ವಿಜಯ್ ಅವರ ಟಿವಿಕೆ ಪಕ್ಷವು 2-4 ಸ್ಥಾನಗಳಲ್ಲಿ ಗೆಲ್ಲಲ್ಲಿದೆ ಎಂದು ಹೇಳಲಾಗಿದೆ. ಪುದುಚೇರಿ ವಿಧಾನಸಭೆಯಲ್ಲಿ 30 ಸ್ಥಾನಗಳಿದ್ದು, ಮ್ಯಾಜಿಕ್ ನಂಬರ್‌ 16 ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+