ಐವರು ಲಷ್ಕರ್ ಎ ತೋಯ್ಬಾ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ, ನವೆಂಬರ್ 18 : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಲಷ್ಕರ್ ಎ ತೋಯ್ಬಾ ಸಂಘಟನೆಗೆ ಸೇರಿದ ಐವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರಿಳಿಸಿದೆ.
ಬಂಡಿಪೋರಾ ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ಶನಿವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಜಾಕಿರ್ ಉರ್ ರೆಹಮಾನ್ ಸೋದರಳಿಯ ಸೇರಿ ಐವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಎನ್ ಕೌಂಟರ್ ನಲ್ಲಿ ಓರ್ವ ಕಮಾಂಡೋ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತೀಯ ಸೇನೆ, ಸಿಆರ್ ಪಿಎಫ್ ಯೋಧರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಮನೆಯೊಂದರಲ್ಲಿ ಅವಿತಿದ್ದ ಉಗ್ರರನ್ನು ಸದೆ ಬಡಿದಿದ್ದಾರೆ. ಹಾಜಿನ್ ಪ್ರದೇಶದಲ್ಲಿ ಇನ್ನೂ ಹಲವು ಉಗ್ರರು ಅವಿತಿರುವ ಸಾಧ್ಯತೆ ಇದ್ದು, ಸೇನೆ ಶೋಧ ಕಾರ್ಯಾಚರಣೆ ಮುಂದುವರೆಸಿದೆ.












Click it and Unblock the Notifications