J&K ನಲ್ಲಿ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 5 ಭಯೋತ್ಪಾದಕರ ಹತ್ಯೆ: ಪೊಲೀಸರು

ಪುಲ್ವಾಮಾ, ಜನವರಿ 30: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಜೈಶ್-ಎ-ಮೊಹಮ್ಮದ್ ಕಮಾಂಡರ್ ಸೇರಿದಂತೆ ಐವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿನ್ನೆ ಸಂಜೆ ಪುಲ್ವಾಮಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಸಂದರ್ಭದಲ್ಲಿ ಎನ್‌ಕೌಂಟರ್‌ಗಳು ನಡೆದಿವೆ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.

"ಕಳೆದ 12 ಗಂಟೆಗಳಲ್ಲಿ ಪಾಕಿಸ್ತಾನದ ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಎಲ್ಇಟಿ ಮತ್ತು ಜೆಎಂ ದ್ವಿ ಎನ್‌ಕೌಂಟರ್‌ನಲ್ಲಿ 5 ಭಯೋತ್ಪಾದಕರು ಹತರಾಗಿದ್ದಾರೆ. ಜೆಎಂ ಕಮಾಂಡರ್ ಭಯೋತ್ಪಾದಕ ಜಾಹಿದ್ ವಾನಿ ಮತ್ತು ಪಾಕಿಸ್ತಾನಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಇದು ನಮಗೆ ದೊಡ್ಡ ಯಶಸ್ಸು" ಎಂದು ಪೊಲೀಸರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

5 Terrorists Shot Dead In 2 Separate Encounters In J&K: Police

ಬುದ್ಗಾಮ್ ಜಿಲ್ಲೆಯ ಚ್ರಾರ್-ಎ-ಶರೀಫ್ ಪ್ರದೇಶದಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಯಿತು. ಎನ್ ಕೌಂಟರ್ ಸ್ಥಳದಿಂದ ಒಂದು ಎಕೆ ರೈಫಲ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿಜಯ್ ಕುಮಾರ್ ಅವರು ಈ ಎನ್‌ಕೌಂಟರ್‌ಗಳನ್ನು ಪೊಲೀಸರ ದೊಡ್ಡ ಯಶಸ್ಸು ಎಂದು ಶ್ಲಾಘಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+