ಕೊರೊನಾ ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ 50 ಲಕ್ಷ ಜನರ ನೋಂದಣಿ
ನವದೆಹಲಿ, ಮಾರ್ಚ್ 03: 'ಕೋವಿನ್' ಪೋರ್ಟಲ್‌ನಲ್ಲಿ ಮಾರ್ಚ್ 1ರ ಬೆಳಗ್ಗೆಯಿಂದ ಇಲ್ಲಿಯವರೆಗೆ 50 ಲಕ್ಷ ಮಂದಿ ಕೊರೊನಾ ಲಸಿಕೆಗಾಗಿ ನೋಂದಣಿ ಮಾಡಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ಮಂಗಳವಾರ ಮಧ್ಯಾಹ್ನದವರೆಗೆ 60 ವರ್ಷಕ್ಕೂ ಮೇಲ್ಪಟ್ಟ ಅಥವಾ ಗಂಭೀರತರದ ಸಮಸ್ಯೆಗಳಿಂದ ಬಳಲುತ್ತಿರುವ 45ರಿಂದ 60 ವರ್ಷಕ್ಕೂ ಕೆಳಗಿನ ಸುಮಾರು 2.08 ಲಕ್ಷ ಫಲಾನುಭವಿಗಳು ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿರುವುದಾಗಿ ಸರ್ಕಾರ ತಿಳಿಸಿದೆ.
ಭಯ ಬಿಡಬೇಕು, ಲಸಿಕೆ ಪಡೆಯಲು ಸಾರ್ವಜನಿಕರು ಮುಂದೆ ಬರಬೇಕು, ಜನ ದಟ್ಟಣೆ ಉಂಟಾಗದೆ, ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ನೀತಿ ಆಯೋಗದ ಸದಸ್ಯ ವಿಕೆ ಪೌಲ್ ಜನರಲ್ಲಿ ಮನವಿ ಮಾಡಿದ್ದಾರೆ.

ಮೊದಲ ಎರಡು ಹಂತಗಳಲ್ಲಿ ಮಾರ್ಚ್ 02ರ ಮಧ್ಯಾಹ್ನದವರೆಗೂ 1,48,55,073 ಕೋವಿಡ್ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.
ಈ ಪೈಕಿ 67,04,856 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. 25,98,192 ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದರು.
ಇದಲ್ಲದೇ, 53, 43,219 ಮುಂಚೂಣಿ ಕಾರ್ಯಕರ್ತರು ಈವರೆಗೂ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದರು.
'ಕೋವಿನ್ ಪೋರ್ಟಲ್ ವ್ಯವಸ್ಥೆಯಲ್ಲಿ ಯಾವುದೇ ದೋಷ ಕಂಡುಬಂದಿಲ್ಲ' ಎಂದು ಹಿರಿಯ ಅಧಿಕಾರಿ ಆರ್ ಎಸ್ ಶರ್ಮಾ ಮಾಹಿತಿ ನೀಡಿದ್ದಾರೆ.












Click it and Unblock the Notifications