ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆಗಾಗಿ ಕೋವಿನ್ ಪೋರ್ಟಲ್‌ನಲ್ಲಿ 50 ಲಕ್ಷ ಜನರ ನೋಂದಣಿ

|
Google Oneindia Kannada News

ನವದೆಹಲಿ, ಮಾರ್ಚ್ 03: 'ಕೋವಿನ್' ಪೋರ್ಟಲ್‌ನಲ್ಲಿ ಮಾರ್ಚ್ 1ರ ಬೆಳಗ್ಗೆಯಿಂದ ಇಲ್ಲಿಯವರೆಗೆ 50 ಲಕ್ಷ ಮಂದಿ ಕೊರೊನಾ ಲಸಿಕೆಗಾಗಿ ನೋಂದಣಿ ಮಾಡಿಸಿದ್ದಾರೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಮಂಗಳವಾರ ಮಧ್ಯಾಹ್ನದವರೆಗೆ 60 ವರ್ಷಕ್ಕೂ ಮೇಲ್ಪಟ್ಟ ಅಥವಾ ಗಂಭೀರತರದ ಸಮಸ್ಯೆಗಳಿಂದ ಬಳಲುತ್ತಿರುವ 45ರಿಂದ 60 ವರ್ಷಕ್ಕೂ ಕೆಳಗಿನ ಸುಮಾರು 2.08 ಲಕ್ಷ ಫಲಾನುಭವಿಗಳು ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿರುವುದಾಗಿ ಸರ್ಕಾರ ತಿಳಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಅಂಕಿ-ಅಂಶಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಅಂಕಿ-ಅಂಶ

ಭಯ ಬಿಡಬೇಕು, ಲಸಿಕೆ ಪಡೆಯಲು ಸಾರ್ವಜನಿಕರು ಮುಂದೆ ಬರಬೇಕು, ಜನ ದಟ್ಟಣೆ ಉಂಟಾಗದೆ, ಸಾಮಾಜಿಕ ಅಂತರವನ್ನು ಕಾಪಾಡಬೇಕು ಎಂದು ನೀತಿ ಆಯೋಗದ ಸದಸ್ಯ ವಿಕೆ ಪೌಲ್ ಜನರಲ್ಲಿ ಮನವಿ ಮಾಡಿದ್ದಾರೆ.

Corona Vaccine

ಮೊದಲ ಎರಡು ಹಂತಗಳಲ್ಲಿ ಮಾರ್ಚ್ 02ರ ಮಧ್ಯಾಹ್ನದವರೆಗೂ 1,48,55,073 ಕೋವಿಡ್ ಲಸಿಕೆ ಡೋಸ್ ಗಳನ್ನು ನೀಡಲಾಗಿದೆ.

ಈ ಪೈಕಿ 67,04,856 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. 25,98,192 ಆರೋಗ್ಯ ಕಾರ್ಯಕರ್ತರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಗಳು ತಿಳಿಸಿದರು.

ಇದಲ್ಲದೇ, 53, 43,219 ಮುಂಚೂಣಿ ಕಾರ್ಯಕರ್ತರು ಈವರೆಗೂ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದರು.

'ಕೋವಿನ್ ಪೋರ್ಟಲ್ ವ್ಯವಸ್ಥೆಯಲ್ಲಿ ಯಾವುದೇ ದೋಷ ಕಂಡುಬಂದಿಲ್ಲ' ಎಂದು ಹಿರಿಯ ಅಧಿಕಾರಿ ಆರ್ ಎಸ್ ಶರ್ಮಾ ಮಾಹಿತಿ ನೀಡಿದ್ದಾರೆ.

English summary
About 50 lakh people have registered themselves on the Co-WIN portal without any glitch since the window opened Monday morning, the Centre said Tuesday, adding that over 2.08 lakh beneficiaries have received their first doses of COVID-19 vaccine in the second phase of inoculation drive so far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X