ಸರ್ಕಾರಿ - ಖಾಸಗಿ ಸಂಸ್ಥೆಗಳ ಶೇ.50 ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯ
ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮಳೆ ಅಥವಾ ಪ್ರಕೃತಿ ವಿಕೋಪ ಎದುರಾಗುವ ಸಂದರ್ಭಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ (ಮನೆಯಿಂದಲೇ ಕೆಲಸ) ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇದೀಗ ಬೆಂಗಳೂರು ಹಾಗೂ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಾಯುಮಾಲಿನ್ಯ ಹೆಚ್ಚಳ ಹಾಗೂ ಚಳಿ ಹೆಚ್ಚಳದಿಂದ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ವರ್ಕ್ ಫ್ರಂ ಹೋಮ್ ಸಹ ಒಂದಾಗಿದೆ.
ಇದೀಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಂಡಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಶೇ50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ ಈ ನಿರ್ದೇಶನಗಳನ್ನು ಉಲ್ಲೇಘಿಸಿದರೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

ಈ ವರ್ಷದ ಚಳಿಗಾಲದಲ್ಲಿ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರಿದ್ದು, ಡಿಸೆಂಬರ್ 15ರಂದು ವಾಯು ಗುಣಮಟ್ಟ ಸೂಚ್ಯಂಕವು(ಎಕ್ಯೂಐ) 498ಕ್ಕೆ ತಲುಪಿತ್ತು.
ಇದು ಇತ್ತೀಚಿನ ವರ್ಷಗಳಲ್ಲೇ ಹೆಚ್ಚು ದಾಖಲಾಗಿರುವ ಕಳಪೆ ವಾಯು ಗುಣಮಟ್ಟದ ಸೂಚ್ಯಂಕವಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ(ಸಿಪಿಸಿಬಿ) ದತ್ತಾಂಶದ ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟ ಮೊದಲು ಕಳಪೆ ಮಟ್ಟದಲ್ಲಿತ್ತು. ಇದೀಗ ತೀವ್ರ ಕಳಪೆ ಮಟ್ಟಕ್ಕೆ ಏರಿದ್ದು, ಎಕ್ಯೂಐ ಕ್ಷೀಣಿಸುತ್ತಿದೆ. ಈ ಬಿಕ್ಕಟ್ಟಿನ ಪರಿಣಾಮವಾಗಿ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ದೆಹಲಿಯಾದ್ಯಂತ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಕಟ್ಟುನಿಟ್ಟಾದ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.
ವಾಯಮಾಲಿನ್ಯದಿಂದ ಹಲವು ಸಮಸ್ಯೆ
ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಹಲವು ಸಮಸ್ಯೆಗಳು ಎದುರಾಗಿವೆ. ಕಳೆದ ವಾರಂತ್ಯದಲ್ಲಿ ವಾಯುಮಾಲಿನ್ಯದಿಂದಾಗಿ ಹಲವು ಅವಘಡಗಳು ಸಂಭವಿಸಿದ್ದವು. ಕಳೆದ ಶನಿವಾರ ಮತ್ತು ಸೋಮವಾರದ ನಡುವೆ ರಾಜಧಾನಿಯಲ್ಲಿ ವಾಯುಮಾಲಿನ್ಯದಿಂದ ದಟ್ಟ ಹೊಗೆ ಆವರಿಸಿತ್ತು. ಅಲ್ಲದೇ ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಕಡೆಗಳಲ್ಲಿ ರಸ್ತೆ ಅಪಘಾತಗಳು, ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಹಾಗೂ ವಿಮಾನ ಸಂಚಾರ ರದ್ದು ಹಾಗೂ ವಿಮಾನ ಹಾರಾಟದಲ್ಲಿ ವ್ಯತ್ಯಾಸವಾಗಿತ್ತು. ಭಾರೀ ವಾಯುಮಾಲಿನ್ಯದಿಂದಾಗಿ ಗೋಚರತೆ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೆಹಲಿ ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಕೆಲವೊಂದು ಪ್ರಮುಖ ಮಾರ್ಗಸೂಚಿ ಪ್ರಕಟಿಸಿತ್ತು.
ಬೆಂಗಳೂರಿನಲ್ಲೂ ವಾಯು ಮಾಲಿನ್ಯ
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿರುವುದರ ನಡುವೆ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ನಗರಗಳು ಹಾಗೂ ವಾಯು ಗುಣಮಟ್ಟವು ಕುಸಿಯಲು ಪ್ರಾರಂಭವಾಗಿದೆ. ಬೆಂಗಳೂರಿನಲ್ಲಿ ಎಕ್ಯೂಐ 180 ದಾಖಲಾಗಿದೆ. ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಅಲ್ಲದೇ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿವಿಧ ಇಲಾಖೆಗಳ ಬೃಹತ್ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸೃಷ್ಟಿಯಾಗುತ್ತಿರುವ ಧೂಳಿನಿಂದಲೂ ಗಾಳಿಯ ಗುಣಮಟ್ಟ ಕುಸಿಯುವುದಕ್ಕೆ ಪ್ರಾರಂಭವಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications