ಭಾರತದಲ್ಲಿ 50,209 ಹೊಸ ಕೋವಿಡ್ ಪ್ರಕರಣಗಳು ದಾಖಲು

ನವದೆಹಲಿ, ನವೆಂಬರ್ 05: ಭಾರತದಲ್ಲಿ 24 ಗಂಟೆಯಲ್ಲಿ 50,209 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 83,64,086ಕ್ಕೆ ಏರಿಕೆಯಾಗಿದೆ.

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 704 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಮೃತಪಟ್ಟ ಒಟ್ಟು ಕೋವಿಡ ಸೋಂಕಿತರ ಸಂಖ್ಯೆ 1,24,315.

50209 New COVID Cases In India In 24 Hours

ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,27,962. ಕಳೆದ 24 ಗಂಟೆಗಳಿಗೆ ಹೋಲಿಕೆ ಮಾಡಿದರೆ 5,825 ರಷ್ಟು ಕಡಿಮೆಯಾಗಿದೆ. ಇದುವರೆಗೂ 77,11,809 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. 24 ಗಂಟೆಯಲ್ಲಿ 55,331 ಜನರು ಡಿಸ್ಚಾರ್ಜ್ ಆಗಿದ್ದಾರೆ.

ದೆಹಲಿಯಲ್ಲಿ ಬುಧವಾರ 6,482 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕಳೆದ 2 ದಿನಗಳಿಂದ ರಾಜ್ಯದಲ್ಲಿ ಹೊಸ ಸೋಂಕಿತರ ಸಂಖ್ಯೆ 6 ಸಾವಿರದ ಗಡಿ ದಾಟಿದ್ದು, ಆತಂಕಕ್ಕೆ ಕಾರಣವಾಗಿದೆ.

ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿ ಬುಧವಾರ 5,505 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 16,98,198ಕ್ಕೆ ಏರಿಕೆಯಾಗಿದೆ.

ಕರ್ನಾಟಕ ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಬುಧವಾರ 3,377 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 8,35,773. ಸಕ್ರಿಯ ಪ್ರಕರಣಗಳು 35,693.

ಆಂಧ್ರ ಪ್ರದೇಶದಲ್ಲಿ 8,33,208. ತಮಿಳುನಾಡಿನಲ್ಲಿ 7,34,429. ಉತ್ತರ ಪ್ರದೇಶದಲ್ಲಿ 4,89,502. ಕೇರಳದಲ್ಲಿ 4,59,647. ದೆಹಲಿಯಲ್ಲಿ 4,09,938 ಒಟ್ಟು ಸೋಂಕಿತ ಪ್ರಕರಣಗಳಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+