ಭಾರತದಲ್ಲಿ ಒಂದೇ ದಿನ 50,000 ಗಡಿ ದಾಟಿದ ಕೊವಿಡ್-19 ಸಂಖ್ಯೆ

ನವದೆಹಲಿ, ನವೆಂಬರ್.07: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೆ 50 ಸಾವಿರದ ಗಡಿ ದಾಟಿದೆ. ದೇಶದಲ್ಲಿ ಒಂದೇ ದಿನ 50357 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ 24 ಗಂಟೆಗಳಲ್ಲಿ 53,920 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 577 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 84,62,081ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ದೇಶದಲ್ಲಿ ಈವರೆಗೂ 1,25,562 ಮಂದಿ ಪ್ರಾಣ ಬಿಟ್ಟಿದ್ದಾರೆ. 78,19,887 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 5,16,632 ಸಕ್ರಿಯ ಪ್ರಕರಣಗಳಿವೆ.

50357 New Covid-19 Cases And 577 Deaths Reported In India In The Last 24 Hours

11,13,209 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,13,209 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 11,65,42,304 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 49655454 ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 12,48,566ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 35251727 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+