ಭಾರತದಲ್ಲಿ ಕೊರೊನಾ ಇಳಿಕೆ, ಗುಣಮುಖರ ಏರಿಕೆ ಜೊತೆ ಲಸಿಕೆ ಕಥೆ

ನವದೆಹಲಿ, ಜೂನ್ 25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 51,667 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 68,885 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಹಾಮಾರಿಗೆ 1,321 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟು 3,01,34,445 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,91,28,267 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,93,310 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 6,12,868 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಒಂದೇ ದಿನ 17 ಲಕ್ಷ ಜನರಿಗೆ ಪರೀಕ್ಷೆ

ಭಾರತದಲ್ಲಿ ಒಂದೇ ದಿನ 17 ಲಕ್ಷ ಜನರಿಗೆ ಪರೀಕ್ಷೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,35,781 ಜನರ ಮಾದರಿಯನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ 39,95,68,448 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

160 ದಿನದಲ್ಲಿ 30.79 ಕೋಟಿ ಫಲಾನುಭವಿಗಳಿಗೆ ಲಸಿಕೆ

160 ದಿನದಲ್ಲಿ 30.79 ಕೋಟಿ ಫಲಾನುಭವಿಗಳಿಗೆ ಲಸಿಕೆ

ಜನವರಿ 16ರಂದು ಮೊದಲ ಬಾರಿಗೆ ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ಚಾಲನೆ ನೀಡಿದರು. ಅಂದಿನಿಂದ 160 ದಿನಗಳಲ್ಲಿ 30,72,46,600 ಜನರಿಗೆ ಲಸಿಕೆ ನೀಡಲಾಗಿದೆ. ದೇಶಾದ್ಯಂತ ನಾಲ್ಕನೇ ಹಂತದಲ್ಲಿ 18-44 ವರ್ಷದವರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಶುರುವಾಗಿರುವ ಹಿನ್ನೆಲೆ ಗುರುವಾರ ಸಂಜೆ 7 ಗಂಟೆ ವೇಳೆಗೆ 54,07,060 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ

ದೇಶದಲ್ಲಿ ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಈವರೆಗೂ 7,43,45,835 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 15,70,839 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೆ 18-44 ವಯೋಮಾನದ 35,44,209 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 67,627 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

10 ಲಕ್ಷಕ್ಕಿಂತ ಹೆಚ್ಚು 18-44 ವಯೋಮಾನದವರಿಗೆ ಲಸಿಕೆ

10 ಲಕ್ಷಕ್ಕಿಂತ ಹೆಚ್ಚು 18-44 ವಯೋಮಾನದವರಿಗೆ ಲಸಿಕೆ

ಭಾರತದಲ್ಲಿ 19 ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು 18-44 ವಯೋಮಾನದ ಫಲಾನುಭವಿಗಳಿಗೆ ಲಸಿಕೆಗೆ ಆದ್ಯತೆ ನೀಡಲಾಗುತ್ತಿದೆ. ಆಂಧ್ರ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ ಗಢ್, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+