ಭಾರತದಲ್ಲಿ ಹೊಸದಾಗಿ 53,480 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಮಾರ್ಚ್ 31: ಭಾರತದಲ್ಲಿ ಹೊಸದಾಗಿ 53,480 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಮಂಗಳವಾರದ ಪ್ರಕರಣಗಳಿಗೆ ಹೋಲಿಸಿದರೆ ಕೊಂಚ ಕಡಿಮೆಯಾದಂತಾಗಿದೆ.
ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 53,480 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
1,21,49,335 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 41,280 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,14,34,301ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,52,566ಕ್ಕೆ ತಲುಪಿದೆ.

ಹೊಸ ಸೋಂಕಿತರ ಸಂಖ್ಯೆ ಸತತ ಏರುಗತಿಯಲ್ಲಿ ಇರುವ ಪರಿಣಾಮ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,21,49,335ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.
ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ. ಈ ನಡುವೆ ಗುರುವಾರ ಒಂದೇ ದಿನ 271 ಮಂದಿ ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,62,468ಕ್ಕೆ ಏರಿಕೆಯಾಗಿದೆ.
ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,30,54,353 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.












Click it and Unblock the Notifications