ಹುಷಾರ್: ಭಾರತದಲ್ಲಿ 50,000ಕ್ಕಿಂತ ಹೆಚ್ಚು ಮಂದಿಗೆ ಕೊರೊನಾ!

ನವದೆಹಲಿ, ಮಾರ್ಚ್ 25: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಭಾರತಕ್ಕೆ ಭಾರತವೇ ತತ್ತರಿಸಿ ಹೋಗಿದೆ. ಐದು ತಿಂಗಳ ನಂತರ ಮತ್ತೊಮ್ಮೆ ದೇಶದಲ್ಲಿ ಕೊವಿಡ್-19 ಸೋಂಕಿನ ಸ್ಫೋಟ ಸಂಭವಿಸಿದೆ.

ದೇಶದಲ್ಲಿ ಒಂದೇ ದಿನ 50,000ಕ್ಕೂ ಹೆಚ್ಚು ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಫೆಬ್ರವರಿ ತಿಂಗಳಿನಲ್ಲಿ 9,000 ಆಸುಪಾಸಿನಲ್ಲಿದ್ದ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ.

ಮಾರ್ಚ್ ತಿಂಗಳ ಆರಂಭದಲ್ಲೇ 20,000ದ ಗಡಿ ದಾಟಿದ ಕೊರೊನಾವೈರಸ್ ಸೋಂಕು ಗುರುವಾರದ ಅಂಕಿ-ಅಂಶಗಳ ಪ್ರಕಾರ 50,000ಕ್ಕೆ ಬಂದು ತಲುಪಿದೆ. ಒಂದೇ ದಿನ 53476 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕೊರೊನಾವೈರಸ್ ಸ್ಫೋಟ, ತಪಾಸಣೆ ಮತ್ತು ಲಸಿಕೆ ವಿತರಣೆ ಕುರಿತು ಒಂದು ವಿಸ್ತೃತ ವರದಿ ಇಲ್ಲಿದೆ.

ಕೊವಿಡ್-19 ಸೋಂಕು ತಗುಲಿದವರ ಸಂಖ್ಯೆ ಎಷ್ಟಿದೆ?

ಕೊವಿಡ್-19 ಸೋಂಕು ತಗುಲಿದವರ ಸಂಖ್ಯೆ ಎಷ್ಟಿದೆ?

ಭಾರತದಲ್ಲಿ ಒಂದೇ ದಿನ 53476 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ ಐದು ತಿಂಗಳ ನಂತರದ ಮೊದಲ ಬಾರಿಗೆ ಸೋಂಕಿತ ಪ್ರಕರಣಗಳ ಸಂಖ್ಯೆ 50,000 ಗಡಿ ದಾಟಿದ್ದು, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,17,87,534ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 26,490 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,12,31,650 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟು?

ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಎಷ್ಟು?

ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 251 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಈವರೆಗೂ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,60,692ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ 3,95,192 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ತಪಾಸಣೆ ವೇಗ ಹೆಚ್ಚಳ

ಭಾರತದಲ್ಲಿ ಕೊರೊನಾವೈರಸ್ ತಪಾಸಣೆ ವೇಗ ಹೆಚ್ಚಳ

ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ತಪಾಸಣೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 10,65,021 ಜನರಿಗೆ ಕೊವಿಡ್-19 ತಪಾಸಣೆ ಮಾಡಲಾಗಿದೆ. ದೇಶದಲ್ಲಿ ಈವರೆಗೂ 23,75,03,882 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

ಕೊವಿಡ್-19 ಸೋಂಕಿಗೆ ನೀಡಿದ ಲಸಿಕೆ

ಕೊವಿಡ್-19 ಸೋಂಕಿಗೆ ನೀಡಿದ ಲಸಿಕೆ

ದೇಶದಲ್ಲಿ ಈವರೆಗೂ 5,31,45,709 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+