ಭಾರತದಲ್ಲಿ 24 ಗಂಟೆಗಳಲ್ಲೇ 53601 ಮಂದಿಗೆ ಕೊರೊನಾವೈರಸ್ ಸೋಂಕು

ನವದೆಹಲಿ, ಆಗಸ್ಟ್.10: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 50,000 ಗಡಿ ದಾಟಿದೆ. 24 ಗಂಟೆಗಳಲ್ಲೇ 53601 ಜನರಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ಪತ್ತೆಯಾಗಿದೆ.

Recommended Video

      Mumbai ಮಳೆಯಲ್ಲಿ ರಸ್ತೆ ನಡುವೆ ನಿಂತು ಮಾನವೀಯತೆ ಮೆರೆದ ಮಹಿಳೆ | Oneindia Kannada

      ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 22,68,676ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 871 ಮಂದಿ ಕೊರೊನಾವೈರಸ್ ಸೋಂಕಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆಯು 45257ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಪತ್ತೆಯಾಗಿರುವ ಒಟ್ಟು 22,68,676 ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ 15,35,744 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,39,929 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

      India: 53601 New Coronavirus Cases Reported in Last 24 Hours

      ಕೊರೊನಾವೈರಸ್ ಪ್ರಕರಣಗಳ ಶೇಕಡಾವಾರು ಅಂಕಿ-ಅಂಶ:

      ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ ಶೇ.69.80ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಶೇ.28.21ರಷ್ಟು ಸಕ್ರಿಯ ಪ್ರಕರಣಗಳಿದ್ದು, ಸಾವಿನ ಪ್ರಮಾಣ ಶೇ.1.99ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

      ವಿಶ್ವದಲ್ಲಿ ಕೊವಿಡ್-19 ಸೋಂಕಿತ ಪ್ರಕರಣ:

      ಕೊರೊನಾವೈರಸ್ ಅಟ್ಟಹಾಸಕ್ಕೆ ಇಡೀ ಜಗತ್ತಿಗೆ ಜಗತ್ತು ತತ್ತರಿಸಿ ಹೋಗಿದೆ. ವಿಶ್ವದಲ್ಲಿ ಇದುವರೆಗೂ 2,02,54,685 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ 7,38,930 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ವಿಶ್ವದಾದ್ಯಂತ 1,31,18,621 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+