ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

15 ದಿನದಲ್ಲಿ 540 ಕೋಟಿ ಮೌಲ್ಯದ ಅಕ್ರಮ ಹಣ, ಮದ್ಯ ವಶ

|
Google Oneindia Kannada News

ನವದೆಹಲಿ, ಮಾರ್ಚ್ 27: ಚುನಾವಣಾ ನೀತಿ ಸಂಹಿತೆ ಜಾರಿ ಆದ ಕೇವಲ 15 ದಿನಗಳಲ್ಲಿ ದೇಶದಾದ್ಯಂತ 540 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಹಣ, ಮದ್ಯ, ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ತಮಿಳುನಾಡು ರಾಜ್ಯದಲ್ಲಿ ಅತಿ ಹೆಚ್ಚು ಮೌಲ್ಯದ ಅಕ್ರಮ ಹಣ, ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲಿ 107.24 ಕೋಟಿ ರೂಪಾಯಿ ಮೌಲ್ಯದ ಹಣ, ಮದ್ಯ ವಶಪಡಿಸಿಕೊಳ್ಳಲಾಗಿದೆ. ಮದ್ಯ ನಿಷೇಧ ಮಾಡಿರುವ ಉತ್ತರ ಪ್ರದೇಶದಲ್ಲಿ ಈವರೆಗೆ 104.53 ಕೋಟಿ ಮೌಲ್ಯದ ಹಣ, ಮದ್ಯ, ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.

ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಮೋದಿ? ಇಲ್ಲಿದೆ ಉತ್ತರ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಮೋದಿ? ಇಲ್ಲಿದೆ ಉತ್ತರ

ಕಡಿಮೆ ಹಣ, ಮದ್ಯ ವಶವಾಗಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಇದೆ. ಕರ್ನಾಟಕದಲ್ಲಿ ಈವರೆಗೆ 26.53 ಕೋಟಿ ಮೌಲ್ಯದ ಅಕ್ರಮ ಹಣ, ಮದ್ಯ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದಲ್ಲಿ 19.11 ಕೋಟಿ, ತೆಲಂಗಣದಲ್ಲಿ 8.2 ಕೋಟಿ ಅಕ್ರಮ ಹಣ, ಮದ್ಯ ವಶಪಡಿಸಿಕೊಳ್ಳಲಾಗಿದೆ.

540 crore rupees worth cash, drug, liquor seized in 15 days nation wide

ಈ ಎಲ್ಲ ಮಾಹಿತಿಯನ್ನು ಕೇಂದ್ರ ಚುನಾವಣಾ ಆಯೋಗ ಹಂಚಿಕೊಂಡಿದ್ದು, ಈ ಮಾಹಿತಿ ಕೇವಲ ಹದಿನೈದು ದಿನಗಳದ್ದಾಗಿದೆ. ಮಾರ್ಚ್‌ 10 ರಿಂದ 25ರವರೆಗೆ ವಿವಿಧ ಕಡೆಗಳಲ್ಲಿ ವಶಪಡಿಸಿಕೊಂಡ ಅಕ್ರಮ ಹಣ, ಮದ್ಯ, ಮಾದಕಗಳ ಮಾಹಿತಿಗಳನ್ನು ಕ್ರೂಡೀಕರಿಸಿ ಕೇಂದ್ರ ಚುನಾವಣಾ ಆಯೋಗ ನೀಡಿದೆ.

English summary
Election commission said, 540 crore rupees worth cash, drug, liquor seized in 15 days nation wide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X