ಅಮೆರಿಕದಿಂದ ಭಾರತಕ್ಕೆ ಬಂದ 545 ಆಕ್ಸಿಜನ್ ಕಾನ್ಸಂಟ್ರೇಟರ್

ನವದೆಹಲಿ, ಮೇ 04; ಕೋವಿಡ್ 2ನೇ ಅಲೆ ತಡೆಯಲು ವಿಶ್ವದ ವಿವಿಧ ರಾಷ್ಟ್ರಗಳು ಭಾರತಕ್ಕೆ ಸಹಾಯ ಮಾಡುತ್ತಿವೆ. ಅಮೆರಿಕರಿಂದ ಐದನೇ ಬ್ಯಾಚ್‌ನ 545 ಆಕ್ಸಿಜನ್ ಕಾನ್ಸಂಟ್ರೇಟರ್ ಭಾರತಕ್ಕೆ ಬಂದು ತಲುಪಿದೆ.

ವಿದೇಶಾಂಗ ಸಚಿವಾಲಯದ ವಕ್ತಾರರಾದ ಅರಿಂದಮ್ ಬಾಗ್ಚಿ ಈ ಕುರಿತು ಟ್ವೀಟ್ ಮಾಡಿದ್ದಾರೆ. "ಅಮೆರಿಕದಿಂದ 5ನೇ ಹಂತದ ವೈದ್ಯಕೀಯ ಉಪಕರಣಗಳು ಬಂದಿವೆ. 545 ಆಕ್ಸಿಜನ್ ಕಾನ್ಸಂಟ್ರೇಟರ್ ಮಂಗಳವಾರ ಆಗಮಿಸಿದೆ" ಎಂದು ಹೇಳಿದ್ದಾರೆ.

ಭಾರತಕ್ಕೆ ವೈದ್ಯಕೀಯ ಸಲಕರಣೆಗಳನ್ನು ಹೊತ್ತು ಸಾಗಬೇಕಿರುವ ಎರಡು ವಿಮಾನಗಳು ತಾಂತ್ರಿಕ ಕಾರಣದಿಂದ ತಡವಾಗಿವೆ. ಬುಧವಾರ ಅವು ದೇಶವನ್ನು ತಲುಪುವ ನಿರೀಕ್ಷೆ ಇದೆ ಎಂದು ಅಮೆರಿಕದ ರಕ್ಷಣಾ ಇಲಾಖೆ ಹೇಳಿದೆ.

545 Oxygen Concentrators Arrives From US

ಭಾನುವಾರ ಅಮೆರಿಕದಿಂದ 1.25 ಲಕ್ಷ ರೆಮ್ಡೆಸಿವಿರ್ ಲಸಿಕೆ ಹೊತ್ತ ವಿಮಾನ ಭಾರತಕ್ಕೆ ಆಗಮಿಸಿತ್ತು. ಶನಿವಾರ 1000 ಆಕ್ಸಿಜನ್ ಸಿಲಿಂಡರ್‌, ಇತರ ವೈದ್ಯಕೀಯ ಉಪಕರಣಗಳನ್ನು ಹೊತ್ತ ವಿಮಾನ ಆಗಮಿಸಿತ್ತು.

ಕಳೆದ ವಾರ ಅಮೆರಿಕದಿಂದ ಎನ್ 95 ಮಾಸ್ಕ್, ಆಕ್ಸಿಜನ್ ಸಿಲಿಂಡರ್ ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿತ್ತು. ಇದುವರೆಗೂ ಒಟ್ಟು 5 ವಿಮಾನಗಳು ದೇಶಕ್ಕೆ ಆಗಮಿಸಿದ್ದು, ತುರ್ತು ಅಗತ್ಯವಿರುವ ವೈದ್ಯಕೀಯ ಉಪಕರಣಗಳ ವ್ಯವಸ್ಥೆಯನ್ನು ಅಮೆರಿಕ ಮಾಡಿದೆ.

ಕಳೆದ 24 ಗಂಟೆಯಲ್ಲಿ ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಕೊಂಚ ಇಳಿಮುಖ ಕಂಡುಬಂದಿದೆ. 3,68,147 ಹೊಸ ಪ್ರಕರಣಗಳು ದಾಖಲಾಗಿವೆ. 3,417 ಜನರು ಮೃತಪಟ್ಟಿದ್ದಾರೆ ಎಂದು ಸೋಮವಾರ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+