Breaking: 24 ಗಂಟೆಯಲ್ಲಿ 547 ಕೊರೊನಾ ಸೋಂಕು, 30 ಸಾವು

ದೆಹಲಿ, ಏಪ್ರಿಲ್ 10: ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಗಂಟೆ ಗಂಟೆಗೂ ಅಧಿಕವಾಗುತ್ತಲೇ ಇದೆ. ಏಪ್ರಿಲ್ 10 ರಂದು ಬೆಳಿಗ್ಗೆ 9 ಗಂಟೆಯವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 6412 ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Recommended Video

      ಇಂತಹ ಒಬ್ರೋ ಇಬ್ರಿಂದ ಎಲ್ಲರಿಗೂ ಕೆಟ್ಟ ಹೆಸರು | Muslim | selling Mask | Seased

      ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 547 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು 30 ಜನರು ಕೊವಿಡ್ ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆ ತಿಳಿಸಿದೆ.

      ದೇಶದಲ್ಲಿ ಒಟ್ಟು 6412 ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 5709 ಕೇಸ್‌ಗಳು ಚಾಲ್ತಿಯಲ್ಲಿದೆ. 504 ಜನರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಡಿಸ್ಚಾರ್ಜ್ ಆಗಿದ್ದಾರೆ. 199 ಮಂದಿ ಸೋಂಕಿನಿಂದ ಹೊರಬರದೆ ಸಾವನ್ನಪ್ಪಿದ್ದಾರೆ.

      547 New COVID19 Cases In Last 24 Hours

      ಏಪ್ರಿಲ್ 9ರ ಸಂಜೆಯವರೆಗೂ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 197ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 6 ಜನರು ಮೃತಪಟ್ಟಿದ್ದು, 30 ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

      ಇನ್ನು ಜಗತ್ತಿನಾದ್ಯಂತ ಒಟ್ಟು 1,604,500 ಜನರಲ್ಲಿ ಕೊರೊನಾ ದೃಢವಾಗಿದೆ. ಅದರಲ್ಲಿ 95,732 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. 356,656 ಜನರು ಈ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ. ಇಟಲಿಯಲ್ಲಿ 18,279 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಯುಎಸ್‌ ದೇಶದಲ್ಲಿ 16,697 ಜನರು ಸಾವನ್ನಪ್ಪಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+