ಲೋಕಸಭಾ ಚುನಾವಣೆ: ಕಾಂಗ್ರೆಸ್ ನ 55 ಮಾಜಿ ಸಚಿವರು ಬಿಜೆಪಿ ಸೇರ್ಪಡೆ!
ಲೋಕಸಭೆ ಚುನಾವಣೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಪಕ್ಷಗಳು ಈಗಿಂದಲೇ ಸಿದ್ಧತೆಯನ್ನು ನಡೆಸಿವೆ. ಮಹಾರಾಷ್ಟ್ರ ರಾಜಕೀಯದಲ್ಲಿ ಬಹುದೊಡ್ಡ ರಾಜಕೀಯ ಬದಲಾವಣೆ ನಡೆಯಲಿದ್ದು, 55 ಮಾಜಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಹೇಳಿದ್ದಾರೆ.
ನಾವು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇವೆ. ನಾವೆಲ್ಲರೂ ಒಟ್ಟಾಗಿ ನಾಂದೇಡ್‌ನಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ. ಅದರಲ್ಲಿ ಯಾವುದೇ ಅನುಮಾನವಿಲ್ಲ.

55 ಕಾಂಗ್ರೆಸ್ ಮಾಜಿ ಶಾಸಕರು ನನ್ನನ್ನು ಭೇಟಿ ಮಾಡಿ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಅವರಿಗೆ ಎಲ್ಲರಿಗೂ ಸ್ವಾಗತ ಎಂದು ಹೇಳಿ ಪಕ್ಷಕ್ಕೆ ಎಂಟ್ರಿ ಕೊಟ್ಟಿದ್ದೇನೆ ಎಂದು ತಿಳಿಸಿದರು. ಬರೋಬ್ಬರಿ 55 ಮಾಜಿ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದು, ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಈ ಬೆಳವಣಿಗೆ ಆಗಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ನಷ್ಟವಾಗಿದೆ.
ಬಿಜೆಪಿ ನಾಯಕ ಅಶೋಕ್ ಚವ್ಹಾಣ್ ಮಾತನಾಡಿ, ನಾವು ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾತನಾಡಿದ್ದೇವೆ, ನಾವೆಲ್ಲರೂ ಒಟ್ಟಾಗಿ ನಾಂದೇಡ್‌ನಲ್ಲಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ. 55 ಮಾಜಿ ಶಾಸಕರ ಬಿಜೆಪಿ ಸೇರ್ಪಡೆ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಲತುಂಬಲಿದೆ ಎಂದರು.
नांदेड-वाघाळा महानगरपालिकेच्या मागील कार्यकाळातील नगरसेवकांशी आज विस्तृत चर्चा झाली. सुमारे ५५ हून अधिक माजी निर्वाचित नगरसेवक आणि स्वीकृत सदस्यांनी मा. पंतप्रधान नरेंद्र मोदी यांच्या नेतृत्वावर विश्वास ठेवून विकासाच्या मुख्य प्रवाहात सहभागी होण्याचा निर्णय घेतला आहे.
— Ashok Chavan (@AshokChavan1958) February 24, 2024
भारतीय… pic.twitter.com/gaYXaL7dIu
ಫೆಬ್ರವರಿ 21 ರಂದು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವೀಸ್ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರಿದ್ದ ಮಾಜಿ ಸಿಎಂ ಅಶೋಕ್ ಚವ್ಹಾಣ್ ಸೇರಿದಂತೆ ಬಿಜೆಪಿಯ ಹೊಸದಾಗಿ ಆಯ್ಕೆಯಾದ ರಾಜ್ಯಸಭಾ ಸದಸ್ಯರನ್ನು ಅಭಿನಂದಿಸಿದ್ದರು. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಫೆಬ್ರವರಿ 13 ರಂದು ಮುಂಬೈನಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 65 ವರ್ಷದ ಅವರನ್ನು ದಕ್ಷಿಣ ಮುಂಬೈನ ಬಿಜೆಪಿ ಕಚೇರಿಯಲ್ಲಿ ಸ್ವಾಗತಿಸಲಾಗಿತ್ತು.
ಬಿಜೆಪಿ ಪಕ್ಷವು ರಾಜ್ಯಸಭೆಗೆ ಅಶೋಕ್ ಚವ್ಹಾಣ್, ಮೇಧಾ ಕುಲಕರ್ಣಿ ಮತ್ತು ಅಜಿತ್ ಗೋಪ್ಚಾಡೆ ಎಂಬ ಮೂವರು ನಾಮನಿರ್ದೇಶಿತರನ್ನು ಕಣಕ್ಕಿಳಿಸಿದೆ. ಈ ಮೂವರೂ ಮಂಗಳವಾರ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆಯಾದರು.












Click it and Unblock the Notifications