• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬ್ರೇಕಿಂಗ್: ಭಾರತದಲ್ಲಿ 27 ಲಕ್ಷದ ಗಡಿ ದಾಟಿದ ಕೊವಿಡ್-19 ಪ್ರಕರಣ

|
Google Oneindia Kannada News

ನವದೆಹಲಿ, ಆಗಸ್ಟ್.18: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 27 ಲಕ್ಷದ ಗಡಿ ದಾಟಿದೆ. ಪ್ರತಿನಿತ್ಯ ಸೋಂಕಿತ ಪ್ರಕರಣಗಳು 50 ಸಾವಿರಕ್ಕಿಂತ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ 55079 ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ.

   Chitradurgaದ ವ್ಯಕ್ತಿ ಮೇಲೆ Corona Vaccine ಪ್ರಯೋಗ | Oneindia Kannada

   ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿನಿಂದ 876 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 51797ಕ್ಕೆ ಏರಿಕೆಯಾಗಿದೆ.

   ಕೊರೊನಾವೈರಸ್ 'ಲಸಿಕೆ'ಗಾಗಿ ಇನ್ನೆಷ್ಟು ದಿನ ಕಾಯಬೇಕು? ಕೊರೊನಾವೈರಸ್ 'ಲಸಿಕೆ'ಗಾಗಿ ಇನ್ನೆಷ್ಟು ದಿನ ಕಾಯಬೇಕು?

   ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು ಈಗಾಗಲೇ 2702743ಕ್ಕೆ ಏರಿಕೆಯಾಗಿದೆ. ಈ ಪೈಕಿ 1977780 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 673166 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.


   24 ಗಂಟೆಗಳಲ್ಲೇ 8,99,864 ಜನರಿಗೆ ಕೊವಿಡ್-19 ತಪಾಸಣೆ:

   ಭಾರತದಲ್ಲಿ ಆಗಸ್ಟ್.17ರ ಅಂಕಿ-ಅಂಶಗಳಿಗೆ ಸಂಬಂಧಿಸಿದಂತೆ ಇದುವರೆಗೂ 3,09,41,264 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 8,99,864 ಜನರ ರಕ್ತೆ ಮತ್ತು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಮಾಹಿತಿ ನೀಡಿದೆ.

   ವಿಶ್ವದಲ್ಲಿ ಇದುವರೆಗೂ 2,20,49,426 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ ಇದುವರೆಗೂ ಪ್ರಾಣ ಬಿಟ್ಟವರ ಸಂಖ್ಯೆ 7,77,439ಕ್ಕೆ ಏರಿಕೆಯಾಗಿದೆ. ಇನ್ನು, 1,47,91,862 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

   English summary
   55079 New Covid-19 Cases And 876 Deaths Reported In India In The Last 24 Hours.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X