ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ 551 ಕಡೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ

|
Google Oneindia Kannada News

ನವದೆಹಲಿ, ಏಪ್ರಿಲ್ 25: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಆತಂಕದ ನಡುವೆ ಹಾಸಿಗೆ ಕೊರತೆ, ವೈದ್ಯಕೀಯ ಆಮ್ಲಜನಕ ಕೊರತೆ, ಐಸಿಯು, ವೆಂಟಿಲೇಟರ್ ಹೀಗೆ ವೈದ್ಯಕೀಯ ಸವಾಲುಗಳನ್ನು ಎದುರಿಸಬೇಕಾದ ಪರಿಸ್ಥಿತಿ ಸೃಷ್ಟಿಯಾಗಿದೆ.

ದೇಶಾದ್ಯಂತ ವೈದ್ಯಕೀಯ ಆಮ್ಲಜನಕ ಕೊರತೆ ನೀಗಿಸುವ ದೃಷ್ಟಿಯಿಂದ ಪ್ರತಿಯೊಂದು ಜಿಲ್ಲಾ ಹಂತದಲ್ಲೂ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಭಾರತದ ಜಿಲ್ಲೆಯ ಪ್ರಮುಖ ಕೇಂದ್ರಗಳು ಸೇರಿದಂತೆ 551 ಕಡೆಗಳಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪಿಎಂ ಕೇರ್ ವತಿಯಿಂದ ಆಕ್ಸಿಜನ್ ಘಟಕ ಸ್ಥಾಪಿಸಲು ಅನುದಾನ ನೀಡಲು ಮುಂದಾಗಿರುವುದಕ್ಕೆ ಪ್ರಧಾನಿಗೆ ಧನ್ಯವಾದ ಅರ್ಪಿಸಿದ್ದಾರೆ.

ದೇಶಾದ್ಯಂತ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆಯನ್ನು ಹೆಚ್ಚಸಲು ಪ್ರಧಾನಮಂತ್ರಿ ನಿರ್ದೇಶನದಂತೆ ಸಾರ್ವಜನಿಕ ಆರೋಗ್ಯ ಸೌಕರ್ಯಗಳೊಳಗೆ 551 ಪ್ರಜರ್ ಸ್ವಿಂಗ್ ಅಡ್ಸಾರ್ಪಷನ್ (ಪಿಎಸ್ಎ) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸ್ಥಾಪನೆಗೆ ನಿಧಿ ಹಂಚಿಕೆ ಮಾಡಲು ಪಿಎಂ ಕೇರ್ಸ್ ನಿಧಿ ತಾತ್ವಿಕ ಅನುಮೋದನೆ ನೀಡಿದೆ. ಎಷ್ಟು ಸಾಧ್ಯವೋ ಅಷ್ಟು ಶೀಘ್ರ ಈ ಘಟಕಗಳು ಕಾರ್ಯಾರಂಭ ಮಾಡಬೇಕು ಎಂದು ಪ್ರಧಾನಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಈ ಘಟಕಗಳಿಂದ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ್ ಲಭ್ಯತೆ ಹೆಚ್ಚಾಗಲಿದೆ ಎಂದು ಸಿಎಂ ಹೇಳಿದ್ದಾರೆ.

551 Oxygen Generation Plants Will Be Established Across India: B S Yediyurappa Tweet About PM Decision

551 ಆಕ್ಸಿಜನ್ ಘಟಕ ಸ್ಥಾಪನೆ ಹಿಂದಿನ ಗುರಿ:

ಭಾರತದ ನಾನಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜಿಲ್ಲಾ ಕೇಂದ್ರಗಳಲ್ಲಿ ಗುರುತಿಸಲಾಗಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ನಿರ್ದಿಷ್ಟ ಘಟಕಗಳನ್ನು ಸ್ಥಾಪನೆ ಮಾಡಲಾಗುವುದು. ಈ ಆಕ್ಸಿಜನ್ ಘಟಕಗಳಿಗೆ ಆರೋಗ್ಯ ಕುಟುಂಬ ಕಲ್ಯಾಣ ಸಚಿವಾಲಯದ ಮೂಲಕ ಖರೀದಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪಿಎಂ ಕೇರ್ಸ್ ನಿಧಿ ಮೂಲಕ ಈ ವರ್ಷದ ಆರಂಭದಲ್ಲಿ ದೇಶದ ಸಾರ್ವಜನಿಕ ಆರೋಗ್ಯ ಸೌಕಯರ್ಗಳಲ್ಲಿ ಹೆಚ್ಚುವರಿಯಾಗಿ 162 ನಿರ್ದಿಷ್ಟ ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಷನ್ (ಪಿಎಸ್ಎ) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಗೆ 201.58 ಕೋಟಿ ರೂ. ಹಂಚಿಕೆ ಮಾಡಲಾಗಿತ್ತು.

ಜಿಲ್ಲಾ ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಆಕ್ಸಿಜನ್ ಉತ್ಪಾದನಾ ಘಟಕಗಳ ಸ್ಥಾಪನೆಯ ಹಿಂದೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಗುರಿ ಹೊಂದಲಾಗಿದೆ. ಜೊತೆಗೆ ಪ್ರತಿಯೊಂದು ಆಸ್ಪತ್ರೆಗಳೂ ಆಕ್ಸಿಜನ್ ಉತ್ಪಾದನಾ ಸೌಕರ್ಯಗಳನ್ನು ಹೊಂದಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದಾಗಿದೆ.

ಆಸ್ಪತ್ರೆ ಒಳಗಿನ ಕ್ಯಾಪ್ಟಿವ್ ಆಕ್ಸಿಜನ್ ಉತ್ಪಾದನಾ ಸೌಕರ್ಯ ಆಸ್ಪತ್ರೆಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಪ್ರತಿದಿನದ ಆಕ್ಸಿಜನ್ ಅಗತ್ಯಗಳನ್ನು ಪೂರೈಸಲಿದೆ. ಅಲ್ಲದೆ ಈ ಕ್ಯಾಪ್ಟಿವ್ ಆಕ್ಸಿಜನ್ ಉತ್ಪಾದನೆ ಜೊತೆ ಹೆಚ್ಚುವರಿಯಾಗಿ ದ್ರವೀಕೃತ ವೈದ್ಯಕೀಯ ಆಕ್ಸಿಜನ್(ಎಲ್ಎಂಒ) 'ಟಾಪ್ ಅಪ್' ರೀತಿಯಲ್ಲಿ ಲಭ್ಯವಾಗುತ್ತದೆ.

ಜಿಲ್ಲಾ ಮಟ್ಟದಲ್ಲಿನ ಆಸ್ಪತ್ರೆಗಳು ದಿಢೀರನೆ ಆಕ್ಸಿಜನ್ ಪೂರೈಕೆ ವ್ಯತ್ಯಯವಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ದೀರ್ಘಾವಧಿಯಲ್ಲಿ ನೆರವಾಗುತ್ತದೆ ಮತ್ತು ಕೋವಿಡ್-19 ರೋಗಿಗಳು ಮತ್ತು ಆಮ್ಲಜನಕ ಅಗತ್ಯವಿರುವ ರೋಗಿಗಳಿಗೆ ಅಗತ್ಯ ಆಕ್ಸಿಜನ್ ಪೂರೈಕೆ ಯಾವುದೇ ಅಡೆತಡೆ ಇಲ್ಲದೆ ಲಭ್ಯವಾಗಲಿದೆ ಎಂದು ತಿಳಿದು ಬಂದಿದೆ.

English summary
551 Oxygen Generation Plants Will Be Established Across India: B S Yediyurappa Tweet About Prime Minister Narendra Modi Decision.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X