ಭಾರತದಲ್ಲಿ ಹೊಸದಾಗಿ 56,211 ಕೋವಿಡ್ 19 ಪ್ರಕರಣಗಳು ಪತ್ತೆ

ನವದೆಹಲಿ, ಮಾರ್ಚ್ 30: ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ, ಆದರೆ ಸೋಮವಾರಕ್ಕೆ ಹೋಲಿಸಿದರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದೆ.

ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ ದಾಖಲೆಯ 56,211 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

1,20,95,855 ಮಂದಿ ಒಟ್ಟಾರೆ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 37,028 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಚೇತರಿಸಿಕೊಂಡವರ ಸಂಖ್ಯೆ 1,13,93,021ಕ್ಕೆ ತಲುಪಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,40,720ಕ್ಕೆ ತಲುಪಿದೆ.

56,211 New COVID 19 Cases In India In Last 24 Hours

ಹೊಸ ಸೋಂಕಿತರ ಸಂಖ್ಯೆ ಸತತ ಏರುಗತಿಯಲ್ಲಿ ಇರುವ ಪರಿಣಾಮ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,20,95,855ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು.

ಇದೀಗ ಹಿರಿಯ ನಾಗರೀಕರಿಗೆ ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿರುವವರಿಗೂ ಲಸಿಕೆ ನೀಡಲಾಗುತ್ತಿದೆ. ಈ ನಡುವೆ ಗುರುವಾರ ಒಂದೇ ದಿನ 271 ಮಂದಿ ಮಹಾಮಾರಿ ವೈರಸ್‌ಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,62,114ಕ್ಕೆ ಏರಿಕೆಯಾಗಿದೆ.

ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 6,11,13,354 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಇನ್ನು ಭಾರತದಲ್ಲಿ ಒಂದೇ ದಿನ 7,85,864 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 24,26,50,025 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+