• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದಲ್ಲಿ 58.82 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಆಗಸ್ಟ್ 23: ಭಾರತದಲ್ಲಿ ಒಂದೇ ದಿನ 56.10 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 57,05,07,750 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 220 ದಿನಗಳಾಗಿದ್ದು, ಸೋಮವಾರ ರಾತ್ರಿ 7 ಗಂಟೆ ವೇಳೆಗೆ 56,10,116 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 58,82,21,623 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

Breakthrough Infection; ಡೆಲ್ಟಾ, ಆಲ್ಫಾ ರೂಪಾಂತರ ಪ್ರಮುಖ ಕಾರಣ...Breakthrough Infection; ಡೆಲ್ಟಾ, ಆಲ್ಫಾ ರೂಪಾಂತರ ಪ್ರಮುಖ ಕಾರಣ...

ದೇಶದಲ್ಲಿ ಒಂದೇ ದಿನ 39,62,091 ಫಲಾನುಭವಿಗಳಿಗೆ ಮೊದಲ ಡೋಸ್, 16,48,025 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು

ಕೊವಿಡ್-19 ಲಸಿಕೆ ಪಡೆದವರ ಅಂಕಿ-ಅಂಶಗಳು

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,53,668 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 82,31,444 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,06,660 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,26,35,749 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 45,55,21,465 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 13,27,00,158 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಲಸಿಕೆ ವಿತರಣೆಯಲ್ಲಿ ಅಗ್ರಸ್ಥಾನದ ರಾಜ್ಯಗಳು

ಲಸಿಕೆ ವಿತರಣೆಯಲ್ಲಿ ಅಗ್ರಸ್ಥಾನದ ರಾಜ್ಯಗಳು

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿತರಿಗೆ ನಾಲ್ಕು ಹಂತದಲ್ಲಿ ಲಸಿಕೆ

ಕೊರೊನಾವೈರಸ್ ಸೋಂಕಿತರಿಗೆ ನಾಲ್ಕು ಹಂತದಲ್ಲಿ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಆಗಸ್ಟ್ 23ರ ಅಂಕಿ-ಅಂಶಗಳ ಪ್ರಕಾರ, 57,05,07,750 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 57,05,07,750

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 13,34,620

* ಕೊವಿಡ್-19 ಲಸಿಕೆಯ ಲಭ್ಯತೆ - 3,44,06,720

      IPLನಲ್ಲಿ ಕಳಪೆ ಪ್ರದರ್ಶನ ನೀಡಿರೋ ಈ 3 ನಾಯಕರಿಗೆ ಸಂಕಷ್ಟ | Oneindia Kannada
      English summary
      In 220 Days 58.82 Crore Beneficiaries Got Vaccinated Against Coronavirus Across India.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X