ಭಾರತದಲ್ಲಿ 59.47 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಆಗಸ್ಟ್ 24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಸಮರೋಪಾದಿಯಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ. ಈವರೆಗೂ 59.47 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 57,05,07,750 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 221 ದಿನಗಳಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 54,67,551 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 59,47,65,751 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,54,204 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 82,49,276 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,09,215 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,27,05,601 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 46,02,10,778 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 13,45,54,973 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

59.47 Crore Beneficiaries Got Vaccinated Against Coronavirus Across India

ಲಸಿಕೆ ವಿತರಣೆಯಲ್ಲಿ ಅಗ್ರಸ್ಥಾನದ ರಾಜ್ಯಗಳು

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿತರಿಗೆ ನಾಲ್ಕು ಹಂತದಲ್ಲಿ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಆಗಸ್ಟ್ 24ರ ಅಂಕಿ-ಅಂಶಗಳ ಪ್ರಕಾರ,57,15,22,580 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 57,15,22,580

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,00,84,700

* ಕೊವಿಡ್-19 ಲಸಿಕೆಯ ಲಭ್ಯತೆ - 3,29,58,715

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಕೊಂಚ ಇಳಿಮುಖವಾಗುತ್ತಿದೆ. ಒಂದು ದಿನದಲ್ಲಿ 25,467 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 39,486 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 354 ಜನರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 4,35,110 ಏರಿಕೆಯಾಗಿದೆ. ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,24,74,773ಕ್ಕೆ ಏರಿಕೆಯಾಗಿದೆ. ಈವರೆಗೂ 3,17,20,112 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 3,19,551 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+