India
  • search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ: ಕೊರೊನಾವೈರಸ್ 2ನೇ ಅಲೆಯಲ್ಲಿ 594 ವೈದ್ಯರು ಸಾವು

|
Google Oneindia Kannada News

ನವದೆಹಲಿ, ಜೂನ್ 02: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಯಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನೂ ಮಹಾಮಾರಿ ಬಿಟ್ಟಿಲ್ಲ. ದೇಶವನ್ನು ಕೊವಿಡ್-19 ಮುಕ್ತಗೊಳಿಸಲು ಶ್ರಮಿಸುತ್ತಿರುವ ವೈದ್ಯರಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ.

ದೇಶದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಆರಂಭದಿಂದ ಮೇ 1ರವರೆಗೆ 594 ವೈದ್ಯಕೀಯ ಸಿಬ್ಬಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಘವು ಮಾಹಿತಿ ನೀಡಿದೆ.

ವೈರಸ್ ಸ್ವರೂಪ ಬದಲಾದರೆ 3ನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ: ಕೇಂದ್ರ ಕಳವಳವೈರಸ್ ಸ್ವರೂಪ ಬದಲಾದರೆ 3ನೇ ಅಲೆಯಲ್ಲಿ ಮಕ್ಕಳ ಮೇಲೆ ಪರಿಣಾಮ: ಕೇಂದ್ರ ಕಳವಳ

ದೇಶದಲ್ಲಿ ಒಂದೇ ದಿನ 1,27,510 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 2,55,287 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,795 ಮಂದಿ ಪ್ರಾಣ ಬಿಟ್ಟಿದ್ದಾರೆ. ಒಟ್ಟು 2,81,75,044 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,59,47,629 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,31,895 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 18,95,520 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಅತಿಹೆಚ್ಚು ವೈದ್ಯಕೀಯ ಸಿಬ್ಬಂದಿ ಮೃತಪಟ್ಟ Top 10 ರಾಜ್ಯಗಳು:

1. ದೆಹಲಿ - 107

2. ಬಿಹಾರ - 96

3. ಉತ್ತರ ಪ್ರದೇಶ - 67

4. ರಾಜಸ್ಥಾನ - 43

5. ಜಾರ್ಖಂಡ್ - 39

6. ಆಂಧ್ರ ಪ್ರದೇಶ - 32

7. ತೆಲಂಗಾಣ - 32

8. ಗುಜರಾತ್ - 31

9. ಪಶ್ಚಿಮ ಬಂಗಾಳ - 25

10. ಒಡಿಶಾ - 22

English summary
594 Doctors Died During The Second Wave Of COVID-19, Says Indian Medical Association.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X