ವಾರಣಾಸಿಯಲ್ಲಿ ಮೋದಿ ವಿರುದ್ಧ ಕಣದಲ್ಲಿರುವ 6 ಅಭ್ಯರ್ಥಿಗಳ ಪಟ್ಟಿ
ನವದೆಹಲಿ, ಮೇ 19: ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದ ಚುನಾವಣೆ ದೇಶ, ವಿದೇಶದ ಗಮನ ಸೆಳೆದಿದೆ. ಈ ಕ್ಷೇತ್ರವನ್ನು ಪ್ರತಿನಿಧಿಸುವುದು ಭಾರತದ ಪ್ರಧಾನಿ ನರೇಂದ್ರ ಮೋದಿ. 2024ರ ಲೋಕಸಭೆ ಚುನಾವಣೆಯಲ್ಲಿಯೂ ವಾರಣಾಸಿಯಲ್ಲಿ ಕಣಕ್ಕಿಳಿಯುವ ಮೂಲಕ ಮೋದಿ ಕ್ಷೇತ್ರದಿಂದ 3ನೇ ಬಾರಿಗೆ ಆಯ್ಕೆ ಬಯಸಿದ್ದಾರೆ.
ಲೋಕಸಭೆ ಚುನಾವಣೆಯ ಕೊನೆಯ ಹಂತವಾದ 7ನೇ ಹಂತದಲ್ಲಿ ವಾರಣಾಸಿಯಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ಮಾಡಿದ್ದು, ರೋಡ್ ಶೋ ನಡೆಸಿ ಕ್ಷೇತ್ರದಲ್ಲಿ ಪ್ರಚಾರವನ್ನು ಸಹ ನಡೆಸಿದ್ದಾರೆ.

ಜೂನ್ 1ರಂದು ನಡೆಯುವ ವಾರಣಾಸಿ ಕ್ಷೇತ್ರದ ಲೋಕಸಭೆ ಚುನಾವಣೆಗೆ ಒಟ್ಟು 39 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಚುನಾವಣಾ ಆಯೋಗದ ಮಾಹಿತಿ ಪ್ರಕಾರ 33 ನಾಮಪತ್ರಗಳು ತಿರಸ್ಕಾರಗೊಂಡಿವೆ. ಅಂತಿಮವಾಗಿ ಕಣದಲ್ಲಿ 6 ಅಭ್ಯರ್ಥಿಗಳು ಉಳಿದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಹಾಸ್ಯನಟ ಶ್ಯಾಮ್ ರಂಗೀಲಾ ಚುನಾವಣಾ ಕಣಕ್ಕಿಳಿದಿದ್ದರು. ಅವರು ನಾಮಪತ್ರವನ್ನು ಸಲ್ಲಿಕೆ ಮಾಡಿದ್ದರು. ಆದರೆ ನಾಮಪತ್ರ ಸಲ್ಲಿಕೆ ಮಾಡುವಾಗ ಅವರು ಪ್ರಮಾಣ ವಚನ ಸ್ವೀಕಾರ ಮಾಡದ ಕಾರಣ ನಾಮಪತ್ರ ತಿರಸ್ಕಾರವಾಗಿದೆ.
ಕಣದಲ್ಲಿರುವ ಅಭ್ಯರ್ಥಿಗಳು: ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿ ಪ್ರಮುಖರು. ಕಾಂಗ್ರೆಸ್‌ನಿಂದ ಅಜಯ್ ರಾಯ್ ಕಣದಲ್ಲಿದ್ದಾರೆ. ಸಮಾಜವಾದಿ ಪಕ್ಷದಿಂದ ಅಥಲ್ ಜಲಾಲ್ ಲಾರಿ ಅಭ್ಯರ್ಥಿ.
ಅಪನಾ ದಳ್ ಪಕ್ಷದಿಂದ ಗಂಗನ್ ಪ್ರಕಾಶ್, ರಾಷ್ಟ್ರೀಯ ಸಮಾಜವಾದಿ ಜನಶಕ್ತಿ ಪಕ್ಷದಿಂದ ಪರಾಸ್ ನಾಥ್ ಕೇಸರಿ ಮತ್ತು ಪಕ್ಷೇತರ ಅಭ್ಯರ್ಥಿಯಾದ ಸಂಜಯ್ ಕುಮಾರಿ ತಿವಾರಿ ಕಣದಲ್ಲಿದ್ದಾರೆ. ಜೂನ್ 1ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.
ವಾರಣಾಸಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ನರೇಂದ್ರ ಮೋದಿ ಚುನಾವಣಾ ಕಣಕ್ಕಿಳಿದಿದ್ದರು. ಬಿಜೆಪಿ ಅಭ್ಯರ್ಥಿಯಾದ ಅವರು 581,022 ಮತಗಳನ್ನು ಪಡೆದು ಜಯಗಳಿಸಿದ್ದರು ಮತ್ತು ಭಾರತದ ಪ್ರಧಾನಿಯಾದರು. ಅವರ ಎದುರಾಳಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ 209,238 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಅಜಯ್ ರಾಯ್ 75,614, ಬಿಎಸ್‌ಪಿಯ ವಿಜಯ್ ಪ್ರಕಾಶ್ ಜೈಸ್ವಾಲ್ 60,579 ಮತ್ತು ಸಮಾಜವಾದಿ ಪಕ್ಷದ ಕೈಲಾಶ್ ಚಾರುಸಿಯಾ 45,291 ಮತಗಳನ್ನು ಪಡೆದರು.
2019ರ ಚುನಾವಣೆಯಲ್ಲಿ ನರೇಂದ್ರ ಮೋದಿ 2ನೇ ಬಾರಿಗೆ ವಾರಣಾಸಿಯಿಂದ ಕಣಕ್ಕಿಳಿದರು. 674,664 ಮತಗಳನ್ನು ಪಡೆದು ಜಯಗಳಿಸಿದರು. 2ನೇ ಅವಧಿಗೆ ಭಾರತದ ಪ್ರಧಾನಿಯಾದರು. ಸಮಾಜವಾದಿ ಪಕ್ಷದಿಂದ ಎದುರಾಳಿಯಾಗಿದ್ದ ಶಾಲಿನಿ ಯಾದವ್ 195,159 ಮತಗಳನ್ನು ಪಡೆದರು. ಕಾಂಗ್ರೆಸ್‌ನ ಅಜಯ್ ರಾಯ್ 152,548 ಮತಗಳನ್ನು ಪಡೆದು ಸೋಲು ಕಂಡರು.
ಕಾಂಗ್ರೆಸ್ 3 ಚುನಾವಣೆಗಳಿಂದಲೂ ಅಜಯ್ ರಾಯ್ ಅವರನ್ನೇ ನರೇಂದ್ರ ಮೋದಿ ವಿರುದ್ಧ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಿದೆ. ಎರಡು ಬಾರಿ ಸೋಲು ಕಂಡಿರುವ ಅವರು 2024ರ ಚುನಾವಣೆಯಲ್ಲಿಯೂ ಮೋದಿಯನ್ನು ಎದುರಿಸುತ್ತಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಆಸ್ತಿ ಮೌಲ್ಯ 3 ಕೋಟಿ ಎಂದು ಘೋಷಣೆ ಮಾಡಿದ್ದಾರೆ. ಈ ಆಸ್ತಿಗಳಲ್ಲಿ ಬಹುತೇಕ ನಿಶ್ಚಿತ ಠೇವಣಿ ರೂಪದಲ್ಲಿವೆ.
ಮೋದಿ ಚರಾಸ್ತಿ ಮೌಲ್ಯ 3,02,06,889. ಇದರಲ್ಲಿ 2.85 ಕೋಟಿಯಷ್ಟು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಲ್ಲಿ ಎಫ್‌ಡಿಯಲ್ಲಿದೆ. ಮೋದಿ ಕೈಯಲ್ಲಿರುವ ನಗದು 52,920 ರೂ.ಗಳು. 45 ಗ್ರಾಂನ 4 ಚಿನ್ನದ ಉಂಗುರ ಹೊಂದಿದ್ದಾರೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರದಲ್ಲಿ 9.12 ಲಕ್ಷ ಹೂಡಿಕೆ ಮಾಡಿದ್ದು, ಕಳೆದ ವರ್ಷ 3.33 ಲಕ್ಷ ರೂ. ಆದಾಯ ತೆರಿಗೆ ಕಟ್ಟಿದ್ದಾರೆ.
-
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ












Click it and Unblock the Notifications