ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಗೆ 6 ಪೊಲೀಸರು ಬಲಿ
ಜಮ್ಮು ಮತ್ತು ಕಾಶ್ಮೀರ, ಜೂನ್ 16: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ 6 ಪೊಲೀಸರು ಅಸುನೀಗಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಅಚಬಲ್ ನಲ್ಲಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ. ಲಷ್ಕರ್ ಉಗ್ರ ಜುನೈದ್ ಮಟ್ಟೂ ಹತ್ಯೆಯ ಬೆನ್ನಿಗೆ ಪೊಲೀಸರ ಮೇಲೆ ಈ ದಾಳಿ ನಡೆದಿದೆ.
ಆರು ಪೊಲೀಸರನ್ನು ಹತ್ಯೆ ಮಾಡಿದ ನಂತರ, ಅವರಲ್ಲಿ ಇಬ್ಬರ ಮುಖವನ್ನು ಗುರುತು ಸಿಗದಂತೆ ಜಜ್ಜಲಾಗಿದೆ. ಆನಂತರ ಪರಾರಿಯಾಗುವ ಮುನ್ನ ಠಾಣೆಯಲ್ಲಿದ್ದ ಶಸ್ತ್ರಾಸ್ತ್ರಗಳನ್ನೆಲ್ಲಾ ಲೂಟಿ ಮಾಡಲಾಗಿದೆ.

ಇನ್ನು ಇಂದು ಬೆಳಗ್ಗೆ ಪಾಕಿಸ್ತಾನದ ಅಪ್ರಚೋದಿತ ಗುಂಡಿನ ದಾಳಿಗೆ ಸೈನಿಕರೊಬ್ಬರು ಸಾವನ್ನಪ್ಪಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications