ಭಾರತದಲ್ಲಿ ಹೊಸದಾಗಿ 60,753 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜೂನ್ 19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 60,753 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 97,743 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ 1647 ಮಂದಿ ಮೃತಪಟ್ಟಿದ್ದಾರೆ, ಇಲ್ಲಿಯವರೆಗೆ 3,85,137 ಮಂದಿ ಮೃತಪಟ್ಟಿದ್ದಾರೆ. ಒಟ್ಟು 2,98,23,546 ಪ್ರಕರಣಗಳಿವೆ, ಇದುವರೆಗೆ 2,86,78,390 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

7,60,019 ಸಕ್ರಿಯ ಪ್ರಕರಣಗಳಿವೆ, 27,23,88,783 ಮಂದಿಗೆ ಲಸಿಕೆ ನೀಡಲಾಗಿದೆ. ಇದುವರೆಗೆ 38,92,07,637 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಜೂನ್ 18 ರಂದು 19,02,009 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 5 ತಿಂಗಳೇ ಕಳೆದು ಹೋಗಿದೆ.

67,208New Coronavirus Cases Reported In India In Last 24 Hours

ಇಷ್ಟು ಅವಧಿಯಲ್ಲಿ ದೇಶದ ವಯಸ್ಕರ ಜನಸಂಖ್ಯೆಯ ಶೇ.5ರಷ್ಟು ಫಲಾನುಭವಿಗಳಿಗೆ ಮಾತ್ರ ಸಂಪೂರ್ಣವಾಗಿ ಕೊವಿಡ್-19 ಲಸಿಕೆ ನೀಡಲಾಗಿದೆ.

ಶುಕ್ರವಾರ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಮಾಹಿತಿ ನೀಡಿತು. ದೇಶದಲ್ಲಿನ 94 ಕೋಟಿ ವಯಸ್ಕರ ಪೈಕಿ 5.04 ಕೋಟಿ ಜನರಿಗೆ ಮಾತ್ರ ಎರಡೂ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+