ದೇಶದಲ್ಲಿ ಕಳೆದ 75 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಜೂನ್ 15: ಭಾರತದಲ್ಲಿ ಹೊಸ ಕೊರೊನಾ ಸೋಂಕಿತ ಪ್ರಕರಣ ಹಾಗೂ ಸಾವಿನ ಸಂಖ್ಯೆ ಎರಡೂ ಇಳಿಮುಖವಾಗಿದೆ.
ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 60,471 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 2726 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಒಟ್ಟು 2,95,70,881 ಕೊರೊನಾ ಸೋಂಕಿತರಿದ್ದಾರೆ, 9,13,378 ಸಕ್ರಿಯ ಪ್ರಕರಣಗಳಿವೆ, ಕಳೆದ 24 ಗಂಟೆಗಳಲ್ಲಿ 1,17,525 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,82,80,472 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.

ಇದುವರೆಗೆ ಒಟ್ಟು 3,77,031 ಮಂದಿ ಮೃತಪಟ್ಟಿದ್ದಾರೆ, 25,90,44,072 ಮಂದಿಗೆ ಲಸಿಕೆ ನೀಡಲಾಗಿದೆ. ಕಳೆದ 75 ದಿನಗಳಲ್ಲೇ ಅತಿ ಕಡಿಮೆ ಕೊರೊನಾ ಪ್ರಕರಣ ದಾಖಲಾಗಿದೆ. ಚೇತರಿಕೆ ಪ್ರಮಾಣ ಶೇ.95.64ರಷ್ಟಾಗಿದೆ. ವಾರದ ಪಾಸಿಟಿವಿಟಿ ದರ ಶೇ.5ಕ್ಕೆ ಇಳಿಕೆಯಾಗಿದೆ. ನಿತ್ಯದ ಪಾಸಿಟಿವಿಟಿ ದರ ಶೇ.3.45ರಷ್ಟಿದೆ.
ಇದುವರೆಗೆ ಒಟ್ಟು 38,13,75,984 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಜೂನ್ 14 ರಂದು 17,51,358 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.












Click it and Unblock the Notifications