ಭಾರತದಲ್ಲಿ 24 ಗಂಟೆಗಳಲ್ಲೇ 60963 ಮಂದಿಗೆ ಕೊರೊನಾವೈರಸ್ ಪಾಸಿಟಿವ್!

ನವದೆಹಲಿ, ಆಗಸ್ಟ್.12: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 60,000 ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 60963 ಜನರಿಗೆ ಕೊವಿಡ್-19 ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 23,29,639ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 834 ಜನರು ಕೊವಿಡ್-19 ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆಯು 46091ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಇದುವರೆಗೂ ಪತ್ತೆಯಾಗಿರುವ ಒಟ್ಟು 23,29,639 ಕೊರೊನಾವೈರಸ್ ಸೋಂಕಿತ ಪ್ರಕರಣಗಳಲ್ಲಿ 16,39,600 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ 6,43,948 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

India: 60963 New Coronavirus Cases Reported in Last 24 Hours

ಭಾರತದಲ್ಲಿ 2,60,15,297 ಜನರಿಗೆ ಕೊವಿಡ್-19 ತಪಾಸಣೆ:

ದೇಶದಲ್ಲಿ 2,60,15,297 ಜನರ ಮಾದರಿಯನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 7,33,449 ಜನರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಅಟ್ಟಹಾಸಕ್ಕೆ ಇಡೀ ಜಗತ್ತಿಗೆ ಜಗತ್ತು ತತ್ತರಿಸಿ ಹೋಗಿದೆ. ವಿಶ್ವದಲ್ಲಿ ಇದುವರೆಗೂ 2,05,22,191 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಮಹಾಮಾರಿಗೆ 7,45,928 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ವಿಶ್ವದಾದ್ಯಂತ 1,34,41,861 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+