24 ಗಂಟೆಗಳಲ್ಲೇ 60975 ಜನಕ್ಕೆ ಕೊವಿಡ್-19 ಸೋಂಕು, 848 ಮಂದಿ ಸಾವು!

ನವದೆಹಲಿ, ಆಗಸ್ಟ್.25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 31 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 60975 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

Recommended Video

      ಕೋವಿಡ್, ನೆರೆ ಹೊರೆ ವಿದ್ಯಾರ್ಥಿಗಳ ಲ್ಯಾಪ್‌ಟ್ಯಾಪ್ ಗೆ ಸರ್ಕಾರ ಬರೆ | Oneindia Kannada

      ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 848 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 58390ಕ್ಕೆ ಏರಿಕೆಯಾಗಿದೆ.

      ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 3167324ಕ್ಕೆ ಏರಿಕೆಯಾಗಿದೆ. ಈ ಪೈಕಿ 24,04,585 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,04,348 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      60975 New Covid-19 Cases And 848 Deaths Reported In India In The Last 24 Hours

      3,68,27,520 ಜನರಿಗೆ ಕೊರೊನಾವೈರಸ್ ಪರೀಕ್ಷೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಇದುವರೆಗೂ 3,68,27,520 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ.

      ವಿಶ್ವದಲ್ಲಿ 2,38,11,693 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,17,005 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,63,60,536 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+