ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 6148 ಜನರನ್ನು ಬಲಿ ತೆಗೆದುಕೊಂಡ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಜೂನ್ 10: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗದಲ್ಲಿ ಸ್ಥಿರತೆ ಕಂಡು ಬಂದಿದೆ. ಕೊವಿಡ್-19 ಮಹಾಮಾರಿಗೆ ಬಲಿಯಾದವರ ಸಂಖ್ಯೆ ಏಕಾಏಕಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ದೇಶದಲ್ಲಿ ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 6148 ಮಂದಿ ಪ್ರಾಣ ಬಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 94,052 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,51,367 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Explained: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯೇ ಸವಾಲು! Explained: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯೇ ಸವಾಲು!

ಭಾರತದಲ್ಲಿ ಒಟ್ಟು 2,91,83,121 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,76,55,493 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,59,676 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 11,67,952 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

20 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

20 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಪರೀಕ್ಷೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳುವುದಕ್ಕೆ ಒಂದು ಕಾರಣವಿದೆ. ದೇಶದ ಮೊದಲಿನಂತೆ ಪ್ರತಿನಿತ್ಯ ಕನಿಷ್ಠ 20 ಲಕ್ಷ ಜನರಿಗೆ ತಪಾಸಣೆ ನಡೆಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 20,04,690 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 37,21,98,253 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 24.24 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ 24.24 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 145 ದಿನಗಳಲ್ಲಿ 24,24,79,167 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

24 ಗಂಟೆಗಳಲ್ಲಿ 31.31 ಲಕ್ಷ ಮಂದಿಗೆ ಕೊವಿಡ್-19 ಲಸಿಕೆ

24 ಗಂಟೆಗಳಲ್ಲಿ 31.31 ಲಕ್ಷ ಮಂದಿಗೆ ಕೊವಿಡ್-19 ಲಸಿಕೆ

ಬುಧವಾರ ರಾತ್ರಿ 7 ಗಂಟೆ ವೇಳೆಗೆ 31,31,759 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 28,37,572 ಜನರಿಗೆ ಮೊದಲ ಡೋಸ್ ಹಾಗೂ 2,94,187 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ವಿತರಣೆ ವ್ಯವಸ್ಥೆ ಹೇಗಿದೆ?

ಕೊವಿಡ್-19 ಲಸಿಕೆ ವಿತರಣೆ ವ್ಯವಸ್ಥೆ ಹೇಗಿದೆ?

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 3,38,08,845 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 4,05,114 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಈವರೆಗೂ 1,00,12,624 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,11,311 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,64,71,228 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 87,51,277 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,33,23,267 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,16,22,718 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,16,38,580 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,95,34,203 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
6148 Coronavirus Infected People Death in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X