ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74 ಲಕ್ಷಕ್ಕೆ ಏರಿಕೆ
ನವದೆಹಲಿ, ಅಕ್ಟೋಬರ್ 17: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 74 ಲಕ್ಷಕ್ಕೆ ಏರಿಕೆಯಾಗಿದೆ. ದಿನೇದಿನೆ ಹೋದಂತೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಭಾರತದಲ್ಲಿ 62,212 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 837 ಮಂದಿ ಮೃತಪಟ್ಟಿದ್ದಾರೆ, ಒಟ್ಟು 74,32,681 ಪ್ರಕರಣಗಳಿವೆ, 7,95,087 ಸಕ್ರಿಯ ಪ್ರಕರಣಗಳಿವೆ. 65,24,596 ಮಂದಿ ಗುಣಮುಖರಾಗಿದ್ದಾರೆ.

1,12,998 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಶುಕ್ರವಾರ 63,371 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರು.895 ಮಂದಿ ಸಾವನ್ನಪ್ಪಿದ್ದರು.
ಭಾರತದಲ್ಲಿ ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ.
ಚಳಿಗಾಲ ಮತ್ತು ಸರಣಿ ಹಬ್ಬಗಳ ಕಾರಣದಿಂದಾಗಿ ಮುಂದಿನ ಎರಡೂವರೆ ತಿಂಗಳುಗಳು ಕೊರೊನ ವೈರಸ್ ವಿರುದ್ಧದ ಹೋರಾಟದಲ್ಲಿ ನಿರ್ಣಾಯಕವಾಗಲಿವೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಕೌನ್ಸಿಲ್ ಫಾರ್ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಂಸ್ಥೆಗಳ ಮುಖ್ಯಸ್ಥರು,ನಿರ್ದೇಶಕರೊಂದಿಗೆ ಕೊವಿಡ್-19 ಸೂಕ್ತ ನಡವಳಿಕೆ ಕುರಿತು ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಹರ್ಷವರ್ಧನ್ ಅವರು, ಭಾರತದಲ್ಲಿ ಕೊರೊನಾ ವೈರಸ್ ನಿಯಂತ್ರಣ ಸಂಬಂಧ ಮುಂದಿನ ಎರಡೂವರೆ ತಿಂಗಳು ಅತ್ಯಂತ ನಿರ್ಣಾಯಕವಾಗಿರಲಿದೆ.
ಮುಂದಿನ 6 ತಿಂಗಳಲ್ಲಿ ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಭಾರತೀಯ ರೆಡ್‌ಕ್ರಾಸ್ ಸೊಸೈಟಿ (ಐಆರ್‌ಸಿಎಸ್) ಮತ್ತು ಸೇಂಟ್ ಜಾನ್ಸ್ ಆಂಬ್ಯುಲೆನ್ಸ್‌ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಗತ್ತಿನ ಇತರೆ ದೇಶಗಳಂತೆಯೇ ಭಾರತ ಕೂಡ ಕೊರೋನಾ ವ್ಯಾಕ್ಸಿನ್ ಲಸಿಕೆ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡಿದೆ.
ಭಾರತ ಇನ್ನು ಕೆಲವೇ ತಿಂಗಳುಗಳ ಅಂತರದಲ್ಲಿ ಕೊರೊನಾ ವ್ಯಾಕ್ಸಿನ್ ಹೊಂದುವ ನಿರೀಕ್ಷೆ ಇದ್ದು, ಮುಂದಿನ ಆರು ತಿಂಗಳಲ್ಲಿ ವ್ಯಾಕ್ಸಿನ್ ಅನ್ನು ದೇಶಾದ್ಯಂತ ವಿತರಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.












Click it and Unblock the Notifications