ಎಚ್ಚರ: ಭಾರತದಲ್ಲಿ ಒಂದೇ 60,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆ

ನವದೆಹಲಿ, ಮಾರ್ಚ್ 27: ದೇಶದಲ್ಲಿ ಕೊರೊನಾ ವೈರಸ್ 2ನೇ ಅಲೆ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ವೇಗಕ್ಕೆ ಭಾರತವೇ ತತ್ತರಿಸಿ ಹೋಗುತ್ತಿದೆ. ಕಳೆದ 160 ದಿನಗಳಲ್ಲಿಯೇ ಮೊದಲ ಬಾರಿ ದೈನಂದಿನ 60,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 62,258 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ಆರು ದಿನಗಳಲ್ಲಿ 1.5 ಲಕ್ಷಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿರುವುದು ಚಿಂತೆಗೀಡು ಮಾಡಿದೆ.

ಶುಕ್ರವಾರ ಕೊರೊನಾ ಸೋಂಕಿತರಲ್ಲಿ 30,386 ಜನರು ಚೇತರಿಸಿಕೊಂಡಿದ್ದರೆ, 291 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ವರದಿಯಲ್ಲಿದೆ.

62,258 New Covid-19 Cases Reported In India In The Last 24 Hours

ಈ ಮೂಲಕ ಭಾರತ ದೇಶದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 1,19,08,910ಕ್ಕೆ ಏರಿದ್ದರೆ, 1,12,95,023 ಪ್ರಕರಣಗಳು ಚೇತರಿಕೆ ಕಂಡಿವೆ.

ಈವರೆಗೆ ಭಾರತದಲ್ಲಿ 1,61,240 ಸೋಂಕಿತರು ಸಾವನ್ನಪ್ಪಿದ್ದು, ಇನ್ನೂ 4,52,647 ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಮಾ.26 ರವರೆಗೆ 5.69 ಕೋಟಿ ಜನರಿಗೆ ಕೊರೊನಾ ಲಸಿಕೆ ಪ್ರಮಾಣವನ್ನು ನೀಡಲಾಗಿದೆ. ಶುಕ್ರವಾರ ಒಂದೇ ದಿನ 14.53 ಲಕ್ಷ ಕೊರೊನಾ ಲಸಿಕೆ ಪ್ರಮಾಣವನ್ನು ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+