ಭಾರತ: 24 ಗಂಟೆಯಲ್ಲಿ ಹೊಸ ಪ್ರಕರಣಗಳಿಗಿಂತ ಡಿಸ್ಚಾರ್ಜ್ ಆದವರು ಹೆಚ್ಚು
ನವದೆಹಲಿ, ಜೂನ್ 16: ಭಾರತದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಮೂರನೇ ಅಲೆ ಬರುವ ಭೀತಿ ಇನ್ನೂ ಕಡಿಮೆಯಾಗಿಲ್ಲ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 62,224 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 1,07,628 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಂದೇ ದಿನದಲ್ಲಿ 2542 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ 3,79,573 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ ಒಟ್ಟು 2,83,88,100 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. 8,65,432 ಸಕ್ರಿಯ ಪ್ರಕರಣಗಳಿವೆ, 2,96,33,105 ಒಟ್ಟು ಪ್ರಕರಣಗಳಿವೆ. ಇದುವರೆಗೆ 26,19,72,014 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 28,00,458 ಮಂದಿಗೆ ಲಸಿಕೆ ನೀಡಲಾಗಿದೆ.

ಚೇತರಿಕೆ ಪ್ರಮಾಣ ಶೇ.95.80ರಷ್ಟು ಏರಿಕೆಯಾಗಿದೆ, ವಾರದ ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಇದೆ ಈಗ ಶೇ.4.17ರಷ್ಟಿದೆ. ನಿತ್ಯದ ಪಾಸಿಟಿವಿಟಿ ದರ ಶೇ.3.22ರಷ್ಟಿದೆ ಶೇ.4.17ರಷ್ಟಿದೆ.
ಭಾರತದಲ್ಲಿ ಪ್ರತಿಯೊಂದು ಗಂಟೆಗೆ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 151 ದಿನಗಳಲ್ಲಿ 26,17,40,273 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.
ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,68,858 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 21,98,144 ಜನರಿಗೆ ಮೊದಲ ಡೋಸ್ ಹಾಗೂ 3,70,714 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications